70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಇಂದು ಘೋಷಣೆಯಾಗಿದೆ. ಹೊಂಬಾಳೆ ಸಂಸ್ಥೆಯ ಮುಡಿಗೆ 4 ರಾಷ್ಟ್ರೀಯ ಚಿತ್ರ ಪ್ರಶಸ್ತಿಗಳು ದಕ್ಕಿದೆ. ‘ಕೆಜಿಎಫ್ 2’ ಚಿತ್ರಕ್ಕೆ ಎರಡು ಪ್ರಶಸ್ತಿ ಬಂದಿದ್ದಕ್ಕೆ, ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದು ನ್ಯಾಷನಲ್ ಸ್ಟಾರ್ ಯಶ್ ಸಂಭ್ರಮಿಸಿದ್ದಾರೆ.
‘ಕೆಜಿಎಫ್ 2’ ಸಿನಿಮಾಗೆ ಎರಡು ನ್ಯಾಷನಲ್ ಅವಾರ್ಡ್ ಸಿಕ್ಕ ಹಿನ್ನೆಲೆ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿ, ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದಿದ್ದಾರೆ.
ನಟ ರಿಷಬ್ ಶೆಟ್ಟಿ, ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್ ಮತ್ತು ಪ್ರಶಾಂತ್ ನೀಲ್‌ಗೆ ಅಭಿನಂದನೆಗಳು. ‘ಕಾಂತಾರ’ ಹಾಗೂ ‘ಕೆಜಿಎಫ್ 2’ಗೆ ಪ್ರಶಸ್ತಿ ಬಂದಿರುವುದು ಅರ್ಹವಾದ ಮನ್ನಣೆಯಾಗಿದೆ ಎಂದು ಯಶ್ ಸಂತಸ ವ್ಯಕ್ತಪಡಿಸಿದ್ದಾರೆ.