ಮಂಗಳೂರು : ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು.

ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು “ಆತ್ಮೀಯ ಮಿತ್ರ ನಿತಿನ್ ರೈ ಕುಕ್ಕುವಳ್ಳಿ ಅವರು ಮಾಡಿರುವ ಮೊದಲ ಸಿನಿಮಾ “ಧರ್ಮ ದೈವ” ತುಳುವರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಅವರ ಎರಡನೇ ಸಿನಿಮಾ “ಧರ್ಮ ಚಾವಡಿ” ಬಿಡುಗಡೆಯಾಗುತ್ತಿದೆ. ತುಳುವರ ಆರಾಧನೆಯಾಗಿರುವ ದೈವಾರಾಧನೆ ಕುರಿತಾದ ಸಿನಿಮಾ ಇದಾಗಿದ್ದು ತುಳುವರು ಮನಪೂರ್ವಕವಾಗಿ ಸಿನಿಮಾ ನೋಡುವ ಮೂಲಕ ಗೆಲ್ಲಿಸಬೇಕು“ ಎಂದರು.

ವೇದಿಕೆಯಲ್ಲಿ ಹಿರಿಯ ರಂಗಕರ್ಮಿ ನಿದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಡಾ ದೇವದಾಸ್ ಕಾಪಿಕಾಡ್, ಪ್ರಕಾಶ್ ಪಾಂಡೇಶ್ವರ್, ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್, ಕ್ಯಾಟ್ಕಾ ಅಧ್ಯಕ್ಷ ಲಂಚುಲಾಲ್ ಕೆ ಎಸ್,ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ, ತುಳುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು,

ಕ್ಯಾಟ್ಕದ ಮಾಜಿ ಅಧ್ಯಕ್ಷ ಮೋಹನ್ ಕೊಪ್ಪಲ, ನಟ ರೂಪೇಶ್ ಶೆಟ್ಟಿ, ಭಾಸ್ಕರ್ ರೈ ಕುಕ್ಕುವಳ್ಳಿ, ಸ್ವರಾಜ್ ಶೆಟ್ಟಿ, ಇಸ್ಮಾಯಿಲ್ ಮೂಡುಶೆಡ್ಡೆ, ಎನ್.ಆರ್.ಕೆ. ವಿಶ್ವನಾಥ್, ತಮ್ಮ ಲಕ್ಷ್ಮಣ್, ಚಂದ್ರಹಾಸ್ ಆಳ್ವ, ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ, ನಟ ರಮೇಶ್ ರೈ ಕುಕ್ಕುವಳ್ಳಿ ಮತ್ತಿತರರು ಉಪಸ್ಥಿತರಿದ್ದರು.