Bengaluru 19°C

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ.

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದೆ. ಇನ್ನು ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ.


ಮುಖ್ಯವಾಗಿ ಕುತ್ತಾರ್, ದಂಬೇಲ್, ಮರಕಡ, ಶೂಲಿನ್ ಪ್ಯಾಲೇಸ್ ಮರವೂರು, ಬೊಂದೇಲ್ ಪಣಂಬೂರು, ಬೈಕಂಪಾಡಿಯಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ.


ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.


ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್.


“‘ಜೈ ಸಿನಿಮಾದಲ್ಲಿ ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ಮೊದಲಾದವರು ಅಭಿನಯಿಸಲಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ.


ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಮೂರನೇ ಹಂತದ ಚಿತ್ರೀಕರಣ ಜನವರಿಯಲ್ಲಿ ನಡೆಯಲಿದೆ ಎಂದು ನಟ, ನಿರ್ದೇಶಕ ರೂಪೇಶ್ ಶೆಟ್ಟಿ ತಿಳಿಸಿದ್ದಾರೆ. 2025 ರಲ್ಲಿ “ಜೈ” ಸಿನಿಮಾ ತೆರೆ ಕಾಣಲಿದೆ.


Nk Channel Final 21 09 2023