Bengaluru 29°C
Ad

ಕಮಲ್ ಹಾಸನ್ ನಟನೆಯ ʼಇಂಡಿಯನ್ 2ʼ ಚಿತ್ರದ ಎರಡನೇ ಹಾಡು ಅನಾವರಣ

ಕಾಲಿವುಡ್‌ ನಟ ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ.

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ.

ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ.

ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ಹೊಂದಿದ್ದಾರೆ.

Ad
Ad
Nk Channel Final 21 09 2023
Ad