Categories: ಮನರಂಜನೆ

ಪ್ರಧಾನಿ ಮೋದಿ ಭೇಟಿಯಾದ ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡ

ಹೊಸದಿಲ್ಲಿ: ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅನ್ನು ನಿರ್ಮಿಸಿದ ಸಾಕ್ಷ್ಯಚಿತ್ರ ನಿರ್ಮಾಪಕ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿ ಮಾಡಿದರು.

“ದಿ ಎಲಿಫೆಂಟ್ ವಿಸ್ಪರರ್ಸ್’ ನ ಚಿತ್ರ ಜಾಗತಿಕವಾಗಿ ಮೆಚ್ಚುಗೆ ಪಡೆದಿದೆ. ಈ ನಿಟ್ಟಿನಲ್ಲಿ ಚಿತ್ರ ತಯಾರಿಸಿದ ಅದ್ಬುತ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ದೊರೆಯಿತು ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

ಸಾಕ್ಷ್ಯಚಿತ್ರವನ್ನು ಗೊನ್ಸಾಲ್ವಿಸ್ ನಿರ್ದೇಶಿಸಿದರೆ, ಮೊಂಗಾ ಅದನ್ನು ನಿರ್ಮಿಸಿದ್ದಾರೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅನಾಥ ಮರಿ ಆನೆ ರಘು ಮತ್ತು ದಂಪತಿ ನಡುವಿನ ಕುರಿತು ಬಾಂಧವ್ಯದ ಕುರಿತ ಕಥೆಯನ್ನು ಚಿತ್ರ ಹೊಂದಿದೆ.

Sneha Gowda

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

47 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

47 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago