ಹೈದರಾಬಾದ್: ಇತ್ತೀಚೆಗೆ ಪ್ರೇಕ್ಷಕರು ಥಿಯೇಟರ್‌ಗೆ ಹೋಗಿ ಸಿನಿಮಾ ನೋಡುವುದು ಹೆಚ್ಚಾಗುತ್ತಿದೆ. ಟಿಕೆಟ್‌ಗೆ ಹಣ ನೀಡುವುದು ಮಾತ್ರವಲ್ಲದೆ, ಮಲ್ಟಿಫ್ಲೆಕ್ಸ್‌ನಲ್ಲಿ ಪಾರ್ಕಿಂಗ್, ಪಾಪ್‌ಕಾರ್ನ್‌ಗೂ ಭಾರೀ ಹಣವನ್ನು ನೀಡಬೇಕಾಗುತ್ತದೆ. ಆದರೆ ಈ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ಮುಂದೆ ಥಿಯೇಟರ್ ಆವರಣದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ನೀಡಬೇಕಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.
ಆ ಮೂಲಕ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲು ಬರುವ ಜನರಿಗೆ ಒಂದಷ್ಟು ಹಣ ಉಳಿತಾಯವಾಗಲಿದೆ. ತೆಲಂಗಾಣದ ಹೈಕೋರ್ಟ್ ಈ ಆದೇಶವನ್ನು ನೀಡಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದ ದಿಲ್ಸುಖ್‌ನಗರದ ಕೊನಾರ್ಕ್ ಥಿಯೇಟರ್‌ನಲ್ಲಿ ಪ್ರೇಕ್ಷಕರಿಂದ 20 ರೂ. ವಾಹನ ಪಾರ್ಕಿಂಗ್ ಶುಲ್ಕ ವಿಧಿಸುವುದನ್ನು ಪ್ರಶ್ನಿಸಿ ಪ್ರೇಮ್ ರಾಮಾವತ್ ಎಂಬುವವರು ಹೈಕೋರ್ಟ್‌ಗೆ ಮೆಟ್ಟಿಲೇರಿದ್ದರು.
ಈ ಬಗ್ಗೆ ಕೋರ್ಟ್ ವಿಚಾರಣೆ ನಡೆಸಿದ್ದು, ಸಿಂಗಲ್ ಸ್ರೀನ್‌ನಲ್ಲಿ ಸಿನಿಮಾ ಟಿಕೆಟ್ ಹೊಂದಿರುವ ಪ್ರೇಕ್ಷಕರಿಗೆ ಯಾವುದೇ ಪಾರ್ಕಿಂಗ್ ಶುಲ್ಕ ವಿಧಿಸುವಂತಿಲ್ಲವೆಂದು ಆದೇಶ ನೀಡಿದೆ. ಈ ಹಿಂದೆ ತೆಲಂಗಾಣದ ಸಿಂಗಲ್ ಹಾಗೂ ಮಲ್ಟಿಫ್ಲೆಕ್ಸ್ ಥಿಯೇಟರ್‌ಗಳಲ್ಲಿ ಸಿನಿಮಾ ನೋಡಲು ಬರುವ ಪ್ರೇಕ್ಷಕರಿಂದ ಪಾರ್ಕಿಂಗ್ ಶುಲ್ಕ ಪಡೆಯುವಂತಿಲ್ಲವೆನ್ನುವ ಆದೇಶವನ್ನು ನೀಡಲಾಗಿತ್ತು. ಆದರೆ ಕೋವಿಡ್ ಸಂಕಷ್ಟದಿಂದಾಗಿ ಥಿಯೇಟರ್ ಮಾಲೀಕರು ಸರ್ಕಾರದ ಮೊರೆ ಹೋಗಿ ಆದೇಶದಿಂದ ವಿನಾಯಿತಿ ಪಡೆದಿದ್ದರು.
ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್‌ಗೆ 20 ರೂ. ಹಾಗೂ ಕಾರು ಪಾರ್ಕಿಂಗ್ ಮಾಡಲು 50 ರೂ. ಪಾರ್ಕಿಂಗ್ ಶುಲ್ಕ ವಿಧಿಸಲಾಗುತ್ತಿದೆ. ಕೋರ್ಟ್ ಆದೇಶ ಇನ್ನಷ್ಟೇ ಜಾರಿಗೆ ಬರಬೇಕಿದೆ.

