ಹೈದರಾಬಾದ್: ಬುಧವಾರ (ಆ.30) ಮಧ್ಯರಾತ್ರಿ ಹೈದರಾಬಾದ್ನ ಮಾದಾಪುರದ ಸರ್ವಿಸ್ ಅಪಾರ್ಟ್ಮೆಂಟ್ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ದಾಳಿ ನಡೆದಿದೆ.
ಈ ವೇಳೆ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿ ಆಗಿದೆ.
ಮಾದಾಪುರದ ವಿಠ್ಠಲ್ರಾವ್ ನಗರದ ವೈಷ್ಣವಿ ಅಪಾರ್ಟ್ಮೆಂಟ್ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಪಡೆದ ಎನ್ಸಿಬಿ ಅಧಿಕಾರಿಗಳು ದಾಳಿ ಮಾಡಿದರು.
ಈ ಪಾರ್ಟಿಯಲ್ಲಿ ಭಾಗವಹಿಸಿದವರ ಹೆಸರು ಇನ್ನಷ್ಟೇ ಹೊರ ಬೀಳಬೇಕಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.