ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಬೆಂಗಳೂರಿನ ನಿವಾಸದಲ್ಲಿ ಉದ್ಯಮಿಯೊಬ್ಬರು ಮೃಪಟ್ಟಿರುವುದು ವರದಿಯಾಗಿದೆ. ಸಾವಿಗೆ ಕಾರಣ ಏನು ಎಂದು ನಿರ್ಧರಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು: ಆರ್.ಆರ್. ನಗರದಲ್ಲಿರುವ ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi thapanda) ಅವರ ನಿವಾಸದಲ್ಲಿ 45 ವರ್ಷದ ಉದ್ಯಮಿ ವೈಶಾಕ್ ಶವವಾಗಿ ಪತ್ತೆಯಾಗಿದ್ದು, ಸಾವಿಗೆ ಕಾರಣ ಏನು ಅನ್ನೋದನ್ನು ಪೊಲೀಸರು ತನಿಖೆ ಮಾಡಲು ಮುಂದಾಗಿದ್ದಾರೆ.
ಅಧಿಕಾರಿಗಳು ಮತ್ತು ಸ್ಥಳೀಯ ವರದಿಗಳ ಆರಂಭಿಕ ಮಾಹಿತಿಯ ಪ್ರಕಾರ, ಪೊಲೀಸರು ಮನೆಗೆ ಭೇಟಿ ನೀಡಿ, ಸ್ಥಳವನ್ನು ಪರಿಶೀಲಿಸಿದ್ದಾರೆ ಮತ್ತು ಘಟನೆಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

