Bengaluru 28°C

ಡಿ.13 ರಂದು ‘ದಸ್ಕತ್’ ತುಳುಚಲನಚಿತ್ರ ಕರಾವಳಿಯಾದ್ಯಂತ ಬಿಡುಗಡೆ

ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಇದೇ ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.

ಉಡುಪಿ: ಮಾಜಿ ಸಚಿವ ಕೃಷ್ಣ ಜೆ.ಪಾಲೇಮಾರ್ ಅರ್ಪಿಸುವ ತುಳು ಚಲನಚಿತ್ರ ‘ದಸ್ಕತ್’ ಇದೇ ಡಿ.13ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ತಿಳಿಸಿದ್ದಾರೆ.


ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವನ್ನು ಚಿತ್ರಿಸುವ ‘ದಸ್ಕತ್’ ನೈಜ ಘಟನೆಯನ್ನಾಧರಿಸಿದ ಚಿತ್ರವಾಗಿದ್ದು, ಬೆಳ್ತಂಗಡಿ ತಾಲೂಕಿನ ವೇಣೂರು, ನಾರಾವಿ, ಅಂಡಿಂಜೆ, ಕೊಕ್ರಾಡಿ ಮುಂತಾದ ಪ್ರದೇಶಗಳಲ್ಲಿ ಚಿತ್ತೀಕರಣ ಮಾಡಲಾಗಿದೆ ಎಂದರು.


ರಾಘವೇಂದ್ರ ಕುಡ್ವ ಚಿತ್ರದ ನಿರ್ಮಾಪಕರಾಗಿದ್ದು, ಸಂತೋಷ್ ಆಚಾರ್ಯ ಗುಂಪಲಾಜಿ ಅವರ ಛಾಯಾಗ್ರಹಣವಿದೆ. ಸಮರ್ಥನ ಎಸ್.ರಾವ್ ಚಿತ್ರದ ಸಂಗೀತ ನಿರ್ದೇಶಕರಾಗಿದ್ದಾರೆ. ಚಿತ್ರದ ತಾರಾಗಣದಲ್ಲಿ ದೀಕ್ಷಿತ್ ಕೆ.ಅಂಡಿಂಜೆ, ನೀರಜ್ ಕುಂಜರ್ಪ, ಮೋಹನ್ ಶೇಣಿ, ಮಿಥುನ್ ರಾಜ್, ಭವ್ಯ ಪೂಜಾರಿ, ಚಂದ್ರಹಾಸ ಉಲ್ಲಾಳ್, ನವೀನ್ ಬೋಂದೇಲ್, ಯೋಗೀಶ್ ಶೆಟ್ಟಿ ಚೇತನ್ ಪೀಲಾರ್, ತಿಮ್ಮಪ್ಪ ಕುಲಾಲ್ ಮುಂತಾದವರು ನಟಿಸಿದ್ದಾರೆ ಎಂದರು.


ಡಿ.13ರಂದು ಉಡುಪಿ, ಮಂಗಳೂರು, ಪುತ್ತೂರು, ಕಾರ್ಕಳ, ಬೆಳ್ತಂಗಡಿಗಳ ಸುಮಾರು 15 ಸಿಂಗಲ್ ಥಿಯೇಟರ್ ಹಾಗೂ ಮಲ್ಟಿಫ್ಲೆಕ್ಸ್ ಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಜನರ ಪ್ರೋತ್ಸಾಹ ನೋಡಿ ಮುಂದೆ ಮುಂಬಯಿ, ಬೆಂಗಳೂರು, ಕಾಸರಗೋಡು ಸೇರಿದಂತೆ ವಿವಿಧೆಡಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಧಾರ ಮಾಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ನಾಯಕ ನಟ ದೀಕ್ಷಿತ್ ಕೆ.ಅಂಡಿಂಜೆ, ನಿಶಿತ್ ಶೆಟ್ಟಿ, ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಉಪಸ್ಥಿತರಿದ್ದರು.


Nk Channel Final 21 09 2023