ಬೆಂಗಳೂರು: ಕನ್ನಡತಿ ಧಾರಾವಾಹಿ ಮೂಲಕ ಕನ್ನಡ ನಾಡಿನ ಮೂಲೆಮೂಲೆಯಲ್ಲಿ ಅಭಿಮಾನಿಗಳನ್ನು ಪಡೆದ ಕಿರಣ್‌ರಾಜ್ ನಾಯಕನಾಗಿ ನಟಿಸುತ್ತಿರುವ ʻರಾನಿʼ ಯು/ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಸಿನಿಮಾ ಇದೇ ಆಗಸ್ಟ್ 30ರಂದು ಬಿಡುಗಡೆಯಾಗುತ್ತಿದೆ. ಗುರುತೇಜ್ ಶೆಟ್ಟಿ ನಿರ್ದೇಶನದ ಸ್ಟಾರ್ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾದ ಚಿತ್ರ ರಾನಿ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ.
ಟೀಸರ್ ಬಿಡುಗಡೆಯಾಗಿದ್ದು ಭರ್ಜರಿ ರೆಸ್ಪಾನ್ಸ್‌ಪಡೆದುಕೊಂಡಿದೆ. ಗುರುತೇಜ್ ಶೆಟ್ಟಿ ಅವರು ನಿರ್ದೇಶಿಸುತ್ತಿರುವ ಈ ಚಿತ್ರದ ಬಗ್ಗೆ ಈಗಾಗಲೇ ಇಂಡಸ್ಟ್ರಿಯಲ್ಲಿ ದೊಡ್ಡ ಮಟ್ಟದ ಟಾಕ್ ನಡೆಯುತ್ತಿದೆ. ಈಗ ಬಿಡುಗಡೆಯಾಗಿರುವ ಟೀಸರ್‌ಅದನ್ನು ಇನ್ನೊಂದು ಹಂತಕ್ಕೇರಿಸಿದೆ.
ಈ ಚಿತ್ರದಲ್ಲಿ ಕಿರಣ್ ರಾಜ್ ಜತೆಗೆ ರವಿಶಂಕರ್, ಮೈಕೋ ನಾಗರಾಜ್, ನಾಗತಿಹಳ್ಳಿ ಚಂದ್ರಶೇಖರ್, ಬಿ ಸುರೇಶ್, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪ್ರಥ್ವೀರಾಜ್, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೇಂದ್ರ ಅರಸ್, ಮನಮೋಹನ ರೈ ಮೊದಲಾದವರು ಇದ್ದಾರೆ. ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ. ಮಣಿಕಾಂತ್ ಕದ್ರಿ ಟ್ಯೂನ್ ಹಾಕಿದ್ದಾರೆ.