ಉಜಿರೆ ಬಿವೋಕ್‌ ವಿದ್ಯಾರ್ಥಿಗಳಿಂದ “ಟ್ಯಾಲೆಂಟ್ಸ್ ಡೇ” ಸಿನೆಮಾ ಬಿಡುಗಡೆ

ಉಜಿರೆ: ಎಸ್‌ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ “ಟ್ಯಾಲೆಂಟ್ಸ್ ಡೇ” ಇದರ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಯುಜಿ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸಿನಿಮಾ ಬಿಡುಗಡೆ ಮಾಡಿ ಮಾತನಾಡಿದ ಮನಶಾಸ್ತ್ರಜ್ಞೆ ಸಿಂಚನಾ ಉರುಬೈಲು, ಸಿನಿಮಾ ನೋಡುವಾಗ ಇದು ವಿದ್ಯಾರ್ಥಿಗಳು ನಿರ್ಮಿಸಿರುವುದು ಎಂದು ಅನಿಸುವುದೇ ಇಲ್ಲ. ಅಷ್ಟು ಚೆನ್ನಾಗಿ ಅದು ತೆರೆ ಮೇಲೆ ಬಂದಿದೆ. ವಿದ್ಯಾರ್ಥಿಗಳ ಈ ಪ್ರಯತ್ನ ಅತ್ಯಂತ ಶ್ಲಾಘನೀಯ, ಈ ಸಿನೆಮಾ ನನ್ನ ಕಾಲೇಜು ದಿನಗಳನ್ನು ನೆನಪಿಸಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಸ್‌ಡಿಎಂಇ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮಾತನಾಡಿ, ಜಾಗತಿಕವಾಗಿ ಇರಲಿ ಅಥವಾ ಒಂದು ಪ್ರಾದೇಶಿಕವಾಗಿಯೂ ಆಗಲಿ, ಸಿನಿಮಾ ಒಂದು ಪ್ರಬಲ ಮಾಧ್ಯಮ. ಇಂತಹ ಕ್ಷೇತ್ರಕ್ಕೆ ಕಾಲೇಜು ಹಂತದಿಂದಲೇ ವಿದ್ಯಾರ್ಥಿಗಳನ್ನು ತಯಾರು ಮಾಡುವುದು ಈಗಿನ ಅನಿವಾರ್ಯತೆ. ಆ ಕೆಲಸವನ್ನು ನಮ್ಮ ಕಾಲೇಜಿನ ಫಿಲ್ಮ್ ಮೇಕಿಂಗ್ ವಿಭಾಗ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಈ ಸಂದರ್ಭ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಎ. ಜಯಕುಮಾರ್ ಶೆಟ್ಟಿ ಹಾಗೂ ಬಿ. ವೋಕ್ ಕೋರ್ಸ್ ಸಂಯೋಜಕ ಸುವೀರ್ ಜೈನ್, ವಿದ್ಯಾರ್ಥಿಗಳ ಯಶಸ್ವಿ ಪ್ರಯತ್ನಕ್ಕೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಟ್ಯಾಲೆಂಟ್ಸ್ ಡೇ ಸಿನೆಮಾದ ನಿರ್ದೇಶಕ ಆಂಟೋನಿ ತಮ್ಮ ಅನುಭವವನ್ನು ಹಂಚಿಕೊಡರು. ಈ ಸಂದರ್ಭದಲ್ಲಿ ಸಂಪೂರ್ಣ ಚಿತ್ರತಂಡ ಜತೆಗಿತ್ತು. ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಜೈನ್ ವಂದಿಸಿದರು. ವಿದ್ಯಾರ್ಥಿನಿ ಫರಾನ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ಪುತ್ತೂರು ಶಾಸಕರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.

6 mins ago

ಪ್ರವಾಸಕ್ಕೆ ಬಂದಿದ್ದ ಮಹಿಳೆ ನೀರಿನಲ್ಲಿ ಮುಳುಗಿ ಮೃತ್ಯು

ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ  ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.

21 mins ago

ಯುವಜನರನ್ನು ಆಧ್ಯಾತ್ಮಿಕ ಜಗತ್ತಿಗೆ ಕೊಂಡೊಯ್ದ ಗೊಸ್ಪೆಲ್ ಗಾಲಾ

ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…

31 mins ago

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

45 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

57 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

59 mins ago