ಉಜಿರೆ: ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

ಉಜಿರೆ, ಫೆ.4: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.

ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ ಪಡೆದಿದೆ.

ಹಿಮ್ಮೇಳದಲ್ಲಿ ಭಾಗವತರಾಗಿ ಮುರಳಿಕೃಷ್ಣ ತೆಂಕಬೈಲು, ಚೆಂಡೆಯಲ್ಲಿ ಮುರಳಿಧರ ಕಲ್ಲೂರಾಯ ಕುಂಜೂರುಪಂಜ ಹಾಗೂ ಮದ್ದಳೆಯಲ್ಲಿ ಶಿತಿಕಂಠ ಭಟ್ ಉಜಿರೆ ಸಹಕರಿಸಿದರು.

ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ಶುಭಾ ಅಡಿಗ ಶ್ರೀರಾಮನಾಗಿ, ಕಿಶೋರಿ ದುಗ್ಗಪ್ಪ ನಡಂಕಲ್ಲು ಅವರು ಲಕ್ಷ್ಮಣನಾಗಿ, ಶುಭಾ ಗಣೇಶ್ ಶ್ರೀಕೃಷ್ಣನಾಗಿ, ಹರಿಣಾಕ್ಷಿ ಜೆ. ಶೆಟ್ಟಿ ಬಲರಾಮನಾಗಿ ಪಾತ್ರ ನಿರ್ವಹಿಸಿದರು.

ಕಲಾವಿದರನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು. ಮುರಳಿಕೃಷ್ಣ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ವರದಿ: ಶಿವಕುಮಾರ

ಚಿತ್ರ: ಶಶಿಧರ ನಾಯ್ಕ

Gayathri SG

Recent Posts

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

4 mins ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

22 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

36 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

2 hours ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago