News Karnataka Kannada
Saturday, May 04 2024
ಮನರಂಜನೆ

ಇನ್ಮುಂದೆ ನಟನೆಗೆ ಮಕ್ಕಳ ಬಳಕೆ ಸುಲಭವಲ್ಲ!

ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗೆ ಮಕ್ಕಳನ್ನು ಬಳಸಿಕೊಳ್ಳುವವರು ಇನ್ಮುಂದೆ ಅಗತ್ಯ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು ನಿಬಂಧನೆಗಳನ್ವಯ ಪರಿಸ್ಥಿತಿಗಳಿಗೆ, ನಿಯಮಗಳಿಗೆ ಒಳಪಡುವುದು ಅನಿವಾರ್ಯವಾಗಿದೆ.
Photo Credit : Freepik

ಮಡಿಕೇರಿ: ಬಾಲ ನಟ, ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗೆ ಮಕ್ಕಳನ್ನು ಬಳಸಿಕೊಳ್ಳುವವರು ಇನ್ಮುಂದೆ ಅಗತ್ಯ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ರ ಕರ್ನಾಟಕ ನಿಯಮಗಳು 2ಸಿ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು ನಿಬಂಧನೆಗಳನ್ವಯ ಪರಿಸ್ಥಿತಿಗಳಿಗೆ, ನಿಯಮಗಳಿಗೆ ಒಳಪಡುವುದು ಅನಿವಾರ್ಯವಾಗಿದೆ.

ಈಗಾಗಲೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ಜಾರಿ ಮಾಡಲಾಗಿದ್ದು, ಅದರಂತೆ ಯಾವುದೇ ಮಗುವನ್ನು ಒಂದು ದಿನದಲ್ಲಿ 5 ಗಂಟೆಗಳಿಗಿಂತ ಹೆಚ್ಚಿನ ಅವಧಿಗೆ ನಟನಾ ಕೆಲಸಕ್ಕೆ ನಿಯೋಜಿಸುವಂತಿಲ್ಲ ಮತ್ತು ವಿಶ್ರಾಂತಿ ಇಲ್ಲದೆ 3 ಗಂಟೆಗಳಿಗಿಂತ ಹೆಚ್ಚು ಕೆಲಸ ಮಾಡಿಸುವಂತಿಲ್ಲ.

ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯ ಪರ ಕಾರ್ಯಕ್ರಮದಲ್ಲಿ ಮಗು ಭಾಗವಹಿಸುವುದಿದ್ದರೆ ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಗಳ ಪೂರ್ವಾನುಮತಿ ಪಡೆದು ಭಾಗವಹಿಸುವಂತೆ ಮಾಡುವುದು ಮತ್ತು ಈ ಚಟುವಟಿಕೆ ಪ್ರಾರಂಭಿಸುವ ಪೂರ್ವದಲ್ಲಿ ನಮೂನೆ ‘ಸಿ’ಯಲ್ಲಿ ಜಿಲ್ಲಾ ದಂಡಾಧಿಕಾರಿಗೆ ಮುಚ್ಚಳಿಕೆ ಪತ್ರ ಸಲ್ಲಿಸುವುದು ಮತ್ತು ಭಾಗವಹಿಸುವ ಮಕ್ಕಳ ಪಟ್ಟಿ ಪೋಷಕರ ಅಥವಾ ಪಾಲಕರ ಒಪ್ಪಿಗೆ ಪತ್ರ ಸಲ್ಲಿಸುವುದು ಕಡ್ಡಾಯವಾಗಲಿದೆ.

ಮಗುವಿನ ಸುರಕ್ಷತೆಗೆ ಸಂಬಂಧಿಸಿದಂತೆ, ನಿರ್ಮಾಪಕರ ಅಥವಾ ಸಮಾರಂಭದ ಆಯೋಜಕರ ಹೆಸರುಗಳನ್ನು ಒದಗಿಸುವುದು. ಮಕ್ಕಳನ್ನು ಬಳಸಿ ಸಂಪೂರ್ಣ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಕ್ಕಳ ದುರುಪಯೋಗ ಪ್ರಕರಣ, ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಬೇಕೆಂದು ಚಲನಚಿತ್ರಗಳ ಅಥವಾ ದೂರದರ್ಶನದ ಪ್ರದರ್ಶನದ ಹಕ್ಕು ನಿರಾಕರಣೆಗೆ ಒಳಪಟ್ಟಿದೆ ಎಂಬುದನ್ನು ನಿರ್ಮಾಪಕರಿಗೆ ಖಚಿತ ಪಡಿಸಬೇಕಾಗಿದೆ.

ಮುಚ್ಚಳಿಕೆಯು 6 ತಿಂಗಳವರೆಗೆ ಮಾನ್ಯವಾಗಿರುತ್ತದೆ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಸುರಕ್ಷತೆ ಮತ್ತು ಮಕ್ಕಳ ದುರುಪಯೋಗ ತಡೆ ಕುರಿತಾದ ಮಾನ್ಯತೆ ಪಡೆದ ಮಾರ್ಗಸೂಚಿಗಳು ಮತ್ತು ಇಂತಹ ಉದ್ದೇಶಗಳಿಗಾಗಿ ಸೂಕ್ತ ಸರ್ಕಾರವು ನಿಗಧಿತವಾಗಿ ಹೊರಡಿಸಿರುವ ಸುರಕ್ಷತಾ ನೀತಿಗಳನ್ನು ಅಳವಡಿಸಿಕೊಂಡಿರುವ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು.

ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸುವುದು. ಮಗುವಿಗೆ ಸಕಾಲಿಕ ಪೌಷ್ಠಿಕ ಆಹಾರ ಒದಗಿಸುವುದು, ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಛ ಮತ್ತು ಸುರಕ್ಷಿತವಾದ ಆಶ್ರಯ ಒದಗಿಸುವುದು, ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತು ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಪಾಲನೆ ಮಾಡುವುದು ಅಗತ್ಯವಾಗಿದೆ.

ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತರವಾಗಿ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದನ್ನು ಖಾತರಿಪಡಿಸುವುದು ಮತ್ತು ಯಾವುದೇ ಮಗು ನಿರಂತರವಾಗಿ 27 ದಿನಗಳಿಂದ ಹೆಚ್ಚಿನ ದಿನಗಳು ನಟನಾ ಕೆಲಸದಲ್ಲಿ ತೊಡಗಲು ಅವಕಾಶ ನೀಡದಂತೆ ಸೂಚಿಸಲಾಗಿದೆ.

ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಶೇ.20 ನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡಬೇಕು. ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸುವುದು. ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಛೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಮತ್ತು ಕ್ರೀಡಾ ಚಟುವಟಿಕೆ ಅನೌಪಚಾರಿಕ ಮನರಂಜನಾ ಚಟುವಟಿಕೆ ಒಳಗೊಂಡಂತೆ ಅವುಗಳಲ್ಲಿ ಭಾಗವಹಿಸುವಂತೆ ಮಾಡಬಾರದು ಎಂದು ಕಾರ್ಮಿಕ ಇಲಾಖೆ ಎಚ್ಚರಿಕೆ ನೀಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು