ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದಾದ್ಯಂತ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಜನಸಾಮಾನ್ಯರು ಮನೆಯಲ್ಲಿ ಲಕ್ಷ್ಮೀ ಪೂಜೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಹಬ್ಬ ಹಿನ್ನೆಲೆಯಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ.
ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಒಂದನ್ನು ಶೇರ್ ಮಾಡಿ ಶುಭಾಶಯ ತಿಳಿಸಿದ್ದಾರೆ. ದೇವರಿಗೆ ಅಭಿಷೇಕ ಮಾಡ್ತಿರುವ ಫೋಟೋ ಶೇರ್ ಮಾಡಿ ಅಭಿಮಾನಿಗಳಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ದರ್ಶನ್ ಅಭಿಮಾನಿಗಳು ಶೇರ್ ಮಾಡಿ ವಿಶಸ್ ಹಂಚಿಕೊಳ್ಳುತ್ತಿದ್ದಾರೆ.