ಉಡುಪಿ: ಕನ್ನಡ ಚಲನಚಿತ್ರ ಖ್ಯಾತ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು.

ಈ ಸಂದರ್ಭ ಮಾತನಾಡಿದ ಅವರು ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮನ ಮಾಡಿಸಿಕೊಂಡಿದ್ದಾರೆ, ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದರು.

ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಲಾಯಿತು. ಮಾತೃ ವೈಭವ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

View this post on Instagram

A post shared by News Karnataka (@newskarnataka)