ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಫಿಲಂ ಚೇಂಬರ್ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ.

ಈ ಬಾರಿ ಒಟ್ಟು 843 ಮತಗಳು ಚಲಾವಣೆಯಾಗಿತ್ತು. ಈ ಪೈಕಿ 512 ಮತ ಪಡೆದ ಜಯಮಾಲ ಅವರು ಗೆಲುವು ಸಾಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಿರ್ಮಾಪಕ, ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ಅವರ ನಡುವೆ ಪೈಪೋಟಿ ಏರ್ಪಟ್ಟಿತ್ತು. ಭಾ.ಮಾ ಹರೀಶ್ ಅವರು 334 ಮತಗಳನ್ನು ಪಡೆದಿದ್ದು, ಹಿರಿಯ ನಟಿ ಜಯಮಾಲಾ ಅವರು 512 ಮತ ಪಡೆದು ಜಯಭೇರಿ ಬಾರಿಸಿದ್ದಾರೆ.