ವಿಕ್ಕಿ ಕೌಶಲ್ ಅಭಿನಯದ `ಛಾವಾ’ದ ಟೀಸರ್‌ ಬಿಡುಗಡೆಗೊಂಡಿದೆ. ತೀವ್ರವಾದ ಯುದ್ಧದ ದೃಶ್ಯಗಳಿಂದ ತುಂಬಿದೆ. ಛತ್ರಪತಿ ಶಿವಾಜಿ ಮಹಾರಾಜರ ಮಗ ಛತ್ರಪತಿ ಸಂಭಾಜಿ ಮಹಾರಾಜ್ ಲುಕ್‌ ಕಂಡು ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಮರಾಠಾ ರಾಜ ಛತ್ರಪತಿ ಶಿವಾಜಿ ಮಹಾರಾಜರ ಹಿರಿಯ ಮಗ ಛತ್ರಪತಿ ಸಂಭಾಜಿ ಮಹಾರಾಜನ ಪಾತ್ರವನ್ನು ವಿಕ್ಕಿ ನಿಭಾಯಿಸಿದ್ದಾರೆ. ಚಿತ್ರವು ಪ್ರಾಥಮಿಕವಾಗಿ ಸಂಭಾಜಿ ಮಹಾರಾಜರ ಶೌರ್ಯ ಅವರ ತ್ಯಾಗ ಮತ್ತು ಯುದ್ಧಗಳನ್ನು ಗೆಲ್ಲುವ ತಂತ್ರಗಳ ಬಗ್ಗೆ ಇದ್ದರೂ, ಗಂಡ ಮತ್ತು ಹೆಂಡತಿಯ ನಡುವಿನ ಭಾವನಾತ್ಮಕ ಪ್ರೇಮಕಥೆಯನ್ನು ಸಹ ಒಳಗೊಂಡಿದೆ. ಮರಾಠ ಸಾಮ್ರಾಜ್ಯದಿಂದ ಸಂಭಾಜಿ ದೂರ ಇದ್ದಾಗ ಅವರ ಹೆಂಡತಿ ಎಲ್ಲವನ್ನೂ ನಿರ್ವಹಿಸುತ್ತಿದ್ದರು ಎನ್ನುವುದು ವಿಶೇಷ. ಈ ವಿಚಾರ ಕೂಡ ಸಿನಿಮಾದಲ್ಲಿ ಹೈಲೈಟ್ ಆಗಲಿದೆ.

ರಶ್ಮಿಕಾ ಈಗಾಗಲೇ ಧ್ವನಿ ತರಬೇತಿಯನ್ನು ಪಡೆದಿದ್ದಾರೆ. ಕತ್ತಿ ಕಾಳಗ, ಕುದುರೆ ಸವಾರಿ ಮತ್ತು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾಗಲು ನಾಲ್ಕು ತಿಂಗಳ ಕಾಲ ತರಬೇತಿಯನ್ನು ವಿಕ್ಕಿ ಅವರು ಪಡೆದುಕೊಂಡಿದ್ದಾರೆ. ಈ ಪ್ರಾಜೆಕ್ಟ್‌ ಅನ್ನು ದೊಡ್ಡದಾಗಿ ಮಾಡಲು ತಾಂತ್ರಿಕವಾಗಿಯೂ ಪಳಗಿದವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಛಾವಾʼ ಸಿನಿಮಾ ಈ ಪ್ರೊಡಕ್ಷನ್ ಹೌಸ್‌ನ ಮೊದಲ ಐತಿಹಾಸಿಕ ಯೋಜನೆಯಾಗಿದೆ. ಈ ಯೋಜನೆ ವಿಕ್ಕಿ ಮತ್ತು ರಶ್ಮಿಕಾ ಅವರ ಮೊದಲ ಸಹಯೋಗವಾಗಿದೆ.