Categories: ಮನರಂಜನೆ

ವಿಡಿಯೋ ವೈರಲ್ ; ಜರಾ ಪಟೇಲ್ ದೇಹಕ್ಕೆ ರಶ್ಮಿಕಾ ಮುಖ, ಮಾರ್ಫ್

ಮುಂಬೈ: ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸದ್ದು ಮಾಡಿತ್ತು. ಇದೀಗ ಮತ್ತೆ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಇನ್ನೂ ನಡೆಯುತ್ತಿದೆ.

ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಮಾಡಿದ್ದಾರೆ. ಈ ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ತಿಳಿದಿದೆ.

ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ತೆಗೆದುಕೊಳ್ಳುವಂತೆ ಅಗ್ರಹಿಸಿದ್ದಾರೆ. ಇದರ ಬೆನ್ನಲೇ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಹೇಳಿದೆ.

Ramya Bolantoor

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

2 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

4 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago