Ad

ಕೇಡು ಬಯಸುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ : ಫ್ಯಾನ್ಸ್​ಗೆ ವಿಜಯಲಕ್ಷ್ಮಿ ಸಂದೇಶ

ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌. ಇದು ಜೈಲು ಸೇರಿರುವುದು ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ನೋವುಂಟು ಮಾಡಿದೆ.

ರೇಣುಕ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌. ಇದು ಜೈಲು ಸೇರಿರುವುದು ಅವರ ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ನೋವುಂಟು ಮಾಡಿದೆ.

Ad
300x250 2

ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್​ ಅವರನ್ನು ನೋಡಬೇಕು ಎಂದು ಅನೇಕ ಅಭಿಮಾನಿಗಳು ಹಂಬಲಿಸುತ್ತಿದ್ದಾರೆ. ಆದರೆ ಅವರನ್ನು ಭೇಟಿ ಮಾಡುವ ಅವಕಾಶ ಸಿಗುತ್ತಿರುವುದು ಕುಟುಂಬದವರಿಗೆ ಮಾತ್ರ. ಈಗ ದರ್ಶನ್​ ಅವರ ಜೊತೆ ಮಾತನಾಡಿ ಬಂದಿರುವ ಪತ್ನಿ ವಿಜಯಲಕ್ಷ್ಮಿಅವರು ಅಭಿಮಾನಿಗಳಿಗೆ ಮುಖ್ಯವಾದ ಒಂದು ಸಂದೇಶ ನೀಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ ನೋಡಿ..
‘ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.
ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನ ಅವರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ’ ಎಂದು ಪೋಸ್ಟ್ ಅನ್ನು ಬರೆದುಕೊಂಡದ್ದಾರೆ. ಇದನ್ನು ಇಂಗ್ಲೀಷ್‌ನಲ್ಲಿಯೂ ತರ್ಜುಮೆ ಮಾಡಿ ಮತ್ತೊಂದು ಪೋಸ್ಟ್ ಅನ್ನೂ ಹಂಚಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad