Ad

ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ ವಿಜಯಲಕ್ಷ್ಮಿ

Viji Y

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ ಎ1 ಎನಿಸಿಕೊಂಡರೆ, ದರ್ಶನ್ ಎ2 ಆರೋಪಿಯಾಗಿದ್ದಾರೆ. ಹೀಗಾಗಿ ಅರೆಸ್ಟ್ ಮಾಡಿದ್ದಾರೆ ಈ ಪ್ರಕರಣದ ವಿಚಾರಣೆ ತೀವ್ರಗೊಂಡಿದೆ. ಈ ಪ್ರಕರಣದಿಂದ ವಿಜಯಲಕ್ಷ್ಮಿ ಅವರು ತೀವ್ರ ಬೇಸರಗೊಂಡಿದ್ದಾರೆ. ಹೀಗಾಗಿ, ಅವರು ಇನ್​ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.

Ad
300x250 2

ದರ್ಶನ್ ಹಾಗೂ ವಿಜಯಲಕ್ಷ್ಮಿ ಜೀವನ ಚೆನ್ನಾಗಿರಲಿ ಎಂಬುದು ರೇಣುಕಾ ಸ್ವಾಮಿ ಉದ್ದೇಶ ಆಗಿತ್ತು. ಈ ಕಾರಣಕ್ಕೆ ಕೀರ್ತಿ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು. ಇದರಿಂದ ಕೋಪಗೊಂಡ ದರ್ಶನ್ ಅವರು ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಸಿ ಕೊಲೆ ಮಾಡಿದ್ದರು ಎನ್ನುವ ಆರೋಪ ಇದೆ. ಈ ಘಟನೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಈ ಕಾರಣಕ್ಕೆ ಅವರು ಇನ್​ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್/ಡಿ ಆ್ಯಕ್ಟೀವೇಟ್ ಮಾಡಿದ್ದಾರೆ.

ದರ್ಶನ್ ಅರೆಸ್ಟ್ ಆದ ಬಳಿಕ ಮೊದಲು ಪ್ರೊಫೈಲ್ ಪಿಕ್ಚರ್​ನ ವಿಜಯಲಕ್ಷ್ಮಿ ಅವರು ತೆಗೆದಿದ್ದರು. ಆ ಬಳಿಕ ದುಬೈ ಟ್ರಿಪ್ ತೆರಳಿದ ಫೋಟೋಗಳನ್ನು ಅವರು ಡಿಲೀಟ್ ಮಾಡಿದ್ದಾರೆ.

Ad
Ad
Nk Channel Final 21 09 2023
Ad