News Karnataka Kannada
Wednesday, May 08 2024
ಮನರಂಜನೆ

ಸಪ್ತಮಿ ಗೌಡ ಅವರ ಬಾಲಿವುಡ್ ಸಿನಿಮಾ ‘ದಿ ವ್ಯಾಕ್ಸಿವ್ ವಾರ್’ ಟ್ರೈಲರ್ ಔಟ್

The Vaccine War Movie
Photo Credit : News Kannada Twitter

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮೂಲಕ ಗಮನ ಸೆಳೆದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಇದೀಗ ಮತ್ತೊಂದು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅದುವೇ ‘ದಿ ವ್ಯಾಕ್ಸಿನ್ ವಾರ್’. ಈ ಸಿನಿಮಾದ ಟ್ರೈಲರ್ ಸೆಪ್ಟೆಂಬರ್ 12ರಂದು ಅದ್ದೂರಿಯಾಗಿ ರಿಲೀಸ್ ಆಗಿದೆ. ವಿಶೇಷ ಅಂದರೆ, ಈ ಸಿನಿಮಾದಲ್ಲಿ ಕನ್ನಡದ ನಟಿ ಸಪ್ತಮಿ ಗೌಡ ಕೂಡ ವಿಜ್ಞಾನಿಯಾಗಿ ಕಾಣಿಸಿಕೊಂಡಿದ್ದಾರೆ.

ಅಂದ್ಹಾಗೆ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಾನಾ ಪಾಟೇಕರ್, ಕಾಂತಾರ ನಟಿ ಸಪ್ತಮಿ ಗೌಡ, ಅನುಪಮ್ ಖೇರ್, ಪಲ್ಲವಿ ಜೋಷಿ ಸೇರಿದಂತೆ ಹಲವು ಮಂದಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಕೊರೊನಾ ವೈರಸ್ ವಿರುದ್ಧ ಭಾರತದ ವಿಜ್ಞಾನಿಗಳು ಲಸಿಕೆಯನ್ನು ಕಂಡು ಹಿಡಿಯುವ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಲಾಗಿದೆ.

ಟ್ರೈಲರ್ ರಿಲೀಸ್ ಆದಲ್ಲಿಂದ ಭಾರತದಲ್ಲಿ ಟ್ರೆಂಡಿಂಗ್‌ನಲ್ಲಿದೆ. ‘ಕಾಂತಾರ’ ಸಿನಿಮಾ ಮೂಲಕ ದೇಶಾದ್ಯಂತ ಸದ್ದು ಮಾಡಿರುವ ಕನ್ನಡದ ನಟಿ ಸಪ್ತಮಿ ಗೌಡ ‘ದಿ ವ್ಯಾಕ್ಸಿನ್ ವಾರ್’ನಲ್ಲಿ ವಿಜ್ಞಾನಿಯಾಗಿ ಕಾಣಿಸಿಕೊಂಡಿದ್ದಾರೆ. ‘ಕಾಂತಾರ’ ಬಳಿಕ ರಿಲೀಸ್ ಆಗಲಿರುವ 2ನೇ ಸಿನಿಮಾವಿದು. ಹೀಗಾಗಿ ಕನ್ನಡಿಗರಲ್ಲಿ ಸಪ್ತಮಿ ಗೌಡ ನಟನೆಯ ಮೊದಲ ಬಾಲಿವುಡ್ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು