News Karnataka Kannada
Wednesday, April 17 2024
Cricket
ಮನರಂಜನೆ

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾಗೆ ಬಂಧನದ ಭೀತಿ

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾಗೆ ಬಂಧನದ ಭೀತಿ ಎದುರಾಗಿದೆ. ವಂಚನೆ ಆರೋಪದಡಿ ಸೋನಾಕ್ಷಿ ವಿರುದ್ಧ ಉತ್ತರಪ್ರದೇಶದ ಮುರಾದಾಬಾದ್ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸೋನಾಕ್ಷಿ ಸಿನ್ಹಾ ಅವರಿಗೆ ಹಿನ್ನೆಡೆಯಾಗಿದ್ದು, ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದೆ.
Photo Credit : News Kannada

ಮುಂಬೈ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾಗೆ ಬಂಧನದ ಭೀತಿ ಎದುರಾಗಿದೆ. ವಂಚನೆ ಆರೋಪದಡಿ ಸೋನಾಕ್ಷಿ ವಿರುದ್ಧ ಉತ್ತರಪ್ರದೇಶದ ಮುರಾದಾಬಾದ್ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸೋನಾಕ್ಷಿ ಸಿನ್ಹಾ ಅವರಿಗೆ ಹಿನ್ನೆಡೆಯಾಗಿದ್ದು, ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದೆ.

2018ರಲ್ಲಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರು ಒಂದು ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದರು. ಅದಕ್ಕಾಗಿ ಕಾರ್ಯಕ್ರಮದ ಆಯೋಜಕ ಪ್ರಮೋದ್ ಶರ್ಮಾ ಎಂಬುವವರಿಂದ ಹಣ ಪಡೆದಿದ್ದಾರೆ. ಹಣ ಪಡೆದುಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದ ಕಾರಣ ಆಯೋಜಕರಿಗೆ ಭಾರೀ ನಷ್ಟವಾಗಿದೆ.

ಹಣ ಪಡೆದು ಕಾರ್ಯಕ್ರಮಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವಂಚನೆ ಆರೋಪದಡಿ ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಮತ್ತು ಆಕೆಯ ಮ್ಯಾನೇಜರ್​ ವಿರುದ್ಧ ದೂರು ದಾಖಲಾಗಿತ್ತು.  ವಿಚಾರಣೆ ಬಳಿಕ ಮುರಾದಾಬಾದ್ ಕೋರ್ಟ್​ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ನ್ಯಾಯಾಲಯ ಫೆಬ್ರವರಿ 28ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು