ವಯನಾಡ್ ಭೂಕುಸಿತಕ್ಕೆ ಇಡೀ ದೇಶವೇ ಮರುಗಿದೆ. 300ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿದೆ. ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ.
ರಶ್ಮಿಕಾ ಮಂದಣ್ಣ, ಮೋಹನ್ ಲಾಲ್, ಸೂರ್ಯ, ಜ್ಯೋತಿಕಾ, ಕಾರ್ತಿ, ವಿಕ್ರಮ್ ಸೇರಿದಂತೆ ಅನೇಕ ಕಲಾವಿದರು ದೇಣಿಗೆ ನೀಡಿದ್ದಾರೆ. ಈ ಸಾಲಿಗೆ ನಟ ಅಲ್ಲು ಅರ್ಜುನ್ ಸೇರ್ಪಡೆಯಾಗಿದ್ದಾರೆ. ಟಾಲಿವುಡ್ ಮಾತ್ರವಲ್ಲದೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಅಲ್ಲು ಅರ್ಜುನ್ ಅವರು ವಯನಾಡು ಭೂಕುಸಿತದ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಔಷಧಿ, ಆಹಾರ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಲಾಗುವುದು. ಅಲ್ಲದೇ, ರಕ್ಷಣಾ ಕಾರ್ಯಾಚರಣೆಗೂ ಈ ದೇಣಿಗೆಯಿಂದ ಅನುಕೂಲ ಆಗಲಿದೆ. ‘ಪುಷ್ಪ 2’ ಸಿನಿಮಾದ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ 10 ಲಕ್ಷ ರೂಪಾಯಿ ರೂಪಾಯಿ ದೇಣಿಗೆ ನೀಡಿದ್ದರು. ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲು ಮೋಹಲ್ಲಾಲ್ ಅವರು 3 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಮಿಲಿಟರಿ ಸಮವಸ್ತ್ರ ಧರಿಸಿ ಅವರು ಭೂಕುಸಿತದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.