Categories: ಮನರಂಜನೆ

ಆರು ದಿನಗಳಲ್ಲಿ ‘ಅನಿಮಲ್‌’ ಚಿತ್ರದ ಗಳಿಕೆ ಎಷ್ಟು?

ಮುಂಬೈ: ಬಾಲಿವುಡ್‌ ನಟ ರಣಬೀರ್‌ ಕಪೂರ್‌ ಹಾಗೂ ನಟಿ ರಶ್ಮಿಕಾ ಮಂದಣ್ಣ ನಟಿಸಿರುವ ಅನಿಮಲ್‌ ಚಿತ್ರವು ವಿಶ್ವದಾದ್ಯಂತ ಬಿಡುಗಡೆಗೊಂಡಿದೆ. ಈ ಸಿನಿಮಾವು ಆರು ದಿನಗಳಲ್ಲಿ ಒಟ್ಟು ₹527.6 ಕೋಟಿ ಗಳಿಸಿದೆ.

ಈ ಕುರಿತು ಪ್ರೊಡಕ್ಷನ್‌ ಹೌಸ್‌ ಟಿ–ಸೀರಿಸ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಅನಿಮಲ್‌ ಚಿತ್ರದ ಕಲೆಕ್ಷನ್‌ ಅಪ್‌ಡೇಟ್‌ ಹಂಚಿಕೊಂಡಿದೆ.

ಅರ್ಜುನ್‌ ರೆಡ್ಡಿ ಖ್ಯಾತಿಯ ಸಂದೀಪ್‌ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್‌’ ಸಿನಿಮಾವು ಡಿಸೆಂಬರ್‌ 1 ರಂದು ಹಿಂದಿ, ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಸೇರಿದಂತೆ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ಅನಿಮಲ್‌ ಚಿತ್ರವನ್ನು ಭೂಷಣ್‌ ಕುಮಾರ್‌, ಕೃಷ್ಣ ಕುಮಾರ್‌ ಅವರ ಟಿ–ಸೀರೀಸ್‌, ಮುರಡ್‌ ಖೇತನ್‌ ಅವರ ಸಿನಿ ಒನ್‌ ಸ್ಟೋಡಿಯೊ ಮತ್ತು ಪ್ರಣಯ್‌ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್‌ ನಿರ್ಮಿಸಿದೆ.

ಚಿತ್ರದಲ್ಲಿ ರಣಬೀರ್‌ ಕಪೂರ್‌ ಪತ್ನಿಯ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದು, ಅನಿಲ್‌ ಕಪೂರ್‌ ಅವರು ರಣಬೀರ್‌ ತಂದೆಯಾಗಿ ನಟಿಸಿದ್ದಾರೆ. ತಂದೆ–ಮಗನ ಸಂಬಂಧ ಸೇರಿದಂತೆ ಅಪರಾಧದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಿದೆ.

Ramya Bolantoor

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

7 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

18 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

28 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

34 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

38 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

40 mins ago