ಚೆನ್ನೈ: ತೆಲುಗಿನ ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಮದುವೆ ಮಾಡಿಕೊಳ್ಳುವುದಾಗಿ ಅತ್ಯಾಚಾರವೆಸಗಿ ವಂಚಿಸಿದ್ದು, ಜೊತೆಗಿದ್ದ ವಿಡಿಯೋಗಳನ್ನು ತೋರಿಸಿ ಬ್ಲಾಕ್ಮೇಲ್ ಮಾಡುತ್ತಿದ್ದಾನೆ. ಅಲ್ಲದೇ ಎರಡು ಕೋಟಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ.
ಹರ್ಷ ಸಾಯಿ ವಿರುದ್ಧ ನಾರಸಿಂಗಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ. ಮದುವೆಯಾಗುವ ನೆಪದಲ್ಲಿ ಹರ್ಷ ಸಾಯಿ ತನ್ನಿಂದ 2 ಕೋಟಿ ರೂಪಾಯಿ ಪಡೆದು ವಂಚಿಸಿದ್ದಾರೆ. ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾಗಿ ಯುವತಿ ಹೇಳಿಕೊಂಡಿದ್ದು, ಹರ್ಷ ಹಾಗೂ ಆತನ ತಂದೆ ರಾಧಾ ಕೃಷ್ಣ ವಿರುದ್ಧ ದೂರು ದಾಖಲಿಸಿದ್ದಾಳೆ. ಹರ್ಷ ಸಾಯಿ ಅವರು ಪರೋಪಕಾರಿ ಎಂದು ಬಿಂಬಿಸಿಕೊಳ್ಳುವ, ಸಾಮಾನ್ಯರಿಗೆ ಸಹಾಯ ಮಾಡುವ ವೀಡಿಯೊಗಳನ್ನು ಹಂಚಿಕೊಳ್ಳುತ್ತಾರೆ, ಅವರು YouTube ನಲ್ಲಿ 10.9 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ.
Ad