‘ರಾಮಾಯಣ’ಕ್ಕೆ ರಾಕಿಭಾಯ್ ಯಶ್ ಪ್ರೊಡ್ಯೂಸರ್

ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ “ರಾಮಾಯಣ” ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಒಟ್ಟಾಗಿ ಕೈ ಜೋಡಿಸಿದ್ದಾರೆ.

ರಾಮಾಯಣ ಸಿನಿಮಾವನ್ನು ಬಹಳ ಅದ್ಧೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ದಂಗಲ್ ನಿರ್ದೇಶಕ ನಿತೀಶ್ ತಿವಾರಿ ಹೊರಟಿದ್ದಾರೆ. ಅದರಂತೆ ಬಹು ಕೋಟಿ ಬಜೆಟ್ ಹಾಕಿ ಈ ಚಿತ್ರ ನಿರ್ಮಾಣ ಮಾಡೋದಿಕ್ಕೆ ರಾಕಿಭಾಯ್ ಹಾಗೂ ನಮಿತ್ ಮಲ್ಹೋತ್ರಾ ಒಂದಾಗಿದ್ದಾರೆ. ಯಶ್ ಒಡೆತನದ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಹೋತ್ರಾ ಸಾರಥ್ಯದ ಪ್ರೈಮ್ ಫೋಕಸ್ ಸ್ಟುಡಿಯೋ ರಾಮಾಯಣ ಸಿನಿಮಾವನ್ನು ನಿರ್ಮಿಸುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಮಿತ್ ಮಲ್ಹೋತ್ರಾ, ‘ರಾಮಾಯಣ ಕಥೆಗೆ ನ್ಯಾಯ ಸಲ್ಲಿಸಲು ನಾನು ಸಿದ್ಧನಾಗಿದ್ದೇನೆ. ನಮ್ಮ ಸಂಸ್ಕ್ರತಿಯನ್ನು ಜಗತ್ತಿಗೆ ಪರಿಚಯಿಸಲು ನಾನು ಉತ್ಸಕನಾಗಿದ್ದು, ನಾನು ಯಶ್ ಅವರಲ್ಲಿಯೂ ಇದನ್ನು ಕಂಡುಕೊಂಡಿದ್ದೇನೆ. ಅವರ ಪಯಣದಿಂದ ನಾನು ಸ್ಪೂರ್ತಿ ಪಡೆದಿದ್ದೇನೆ. ಯಶ್ ಅವರಲ್ಲಿರುವ ಯೋಜನೆಯನ್ನು ಅರಿತುಕೊಂಡಿದ್ದೇನೆ. ರಾಮಾಯಣ ದೃಶ್ಯಕಾವ್ಯವನ್ನು ತೆರೆಗೆ ತರುತ್ತಿದ್ದೇವೆ’ ಎಂದರು.

ಯಶ್ ಮಾತನಾಡಿ, ‘ಭಾರತೀಯ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ಪ್ರರ್ದಶಿಸುವುದು ನನ್ನ ಬಹುದಿನಗಳ ಕನಸು. ಅದರ ಹುಡುಗಾಟದಲ್ಲಿ ನಾನು ಅತ್ಯುತ್ತಮ VFC ಸ್ಟುಡಿಯೋ ಕಂಡುಕೊಂಡಿದ್ದೇನೆ. ಅದರ ಹಿಂದಿನ ಪ್ರೇರಕ ಶಕ್ತಿ ಒಬ್ಬ ಭಾರತೀಯ. ನಾವು ಸಿನಿಮಾ ರಂಗದ ಬೇರೆ ವಿಷಯಗಳ ಬಗ್ಗೆ ಚರ್ಚೆ ನಡೆಸುವಾಗ ರಾಮಾಯಣ ವಿಷಯವು ಬಂದಿತ್ತು. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಸ್ತುತಪಡಿಸುವ ಸಿನಿಮಾ ಇದಾಗಿದ್ದು, ಈ ಮಹಾಕಾವ್ಯ ಸಿನಿಮಾ ರೂಪ ತಾಳುತ್ತಿದೆ. ಆ ಅತ್ಯುತ್ತಮ ಅನುಭವನ್ನು ಜಗತ್ತಿಗೆ ನೀಡಲು ನಾವು ಕಾತರರಾಗಿದ್ದೇವೆ ಎಂದರು.

 

Ashitha S

Recent Posts

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

16 mins ago

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

41 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

57 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

1 hour ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

2 hours ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

3 hours ago