ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಬೃಹತ್ ಸೆಟ್ ನಿರ್ಮಿಸಲಾಗಿದೆ.
ಅನಧಿಕೃತವಾಗಿ ಸಿನಿಮಾ ಸೆಟ್ ನಿರ್ಮಿಸಲಾಗಿದೆ ಎಂದು ನಿರ್ಮಾಪಕರ ವಿರುದ್ಧ ದೂರು ನೀಡಲಾಗಿದ್ದು, ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ ಶುರುವಾಗಿದೆ.
ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ ಸುಮಾರು 20 ಎಕರೆ ಜಾಗದಲ್ಲಿ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ. ಆದರೆ ಈ ಸೆಟ್ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಹಾಕಲಾಗಿದೆ ಎಂದು ಆರೋಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಅವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಿದ್ದಾರೆ.
ಅಕ್ರಮವಾಗಿ ನಿರ್ಮಿಸಲಾಗಿರುವ ಈ ಸೆಟ್ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಅರ್ಜಿ ವಿಚಾರಣೆಗೆ ಅರ್ಹವೆಂದು ಪರಿಗಣಿಸಿರುವ ಹೈಕೋರ್ಟ್ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.

