Ad

ಪಂಚೆ ಉಟ್ಟು ಧರ್ಮಸ್ಥಳದಲ್ಲಿ ಕಾಣಿಸಿಕೊಂಡ ರಾಕಿಂಗ್‌ ಸ್ಟಾರ್ ಯಶ್

Yash (1)

ಮಂಗಳೂರು: ನಟ ಯಶ್ ಅವರು ಇಂದು (ಆಗಸ್ಟ್ 6) ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳು ಶುರುವಾಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇದರ ಜೊತೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ಯಶ್ ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕಿದೆ. ಇದರ ಶೂಟಿಂಗ್ ಆರಂಭ ಆಗುವುದಕ್ಕೂ ಮೊದಲು ಅವರು ಧರ್ಮಸ್ಥಳಕ್ಕೆ ಬಂದು ಮಂಜುನಾಥನ ದರ್ಶನ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಯಶ್ ಅವರು ಪಂಚೆ ಉಟ್ಟು ಮಂಗಳೂರು ವಿಮಾನ ನಿಲ್ದಾಣದಿಂದ ಹೊರಗೆ ಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ಬಳಿಕ ಅವರು ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಧರ್ಮಸ್ಥಳದಲ್ಲಿ ಯಶ್ ಅವರು ಮೊದಲು ದೇವರ ದರ್ಶನ ಪಡೆದಿದ್ದಾರೆ. ಆ ಬಳಿಕ ಧರ್ಮಾಧಿಕಾ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಆ ಬಳಿಕ ಇಬ್ಬರೂ ಕುಳಿತು ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ‌

Ad
Ad
Nk Channel Final 21 09 2023