ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಬಿಡುಗಡೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ.
ಈ ಹಿಂದೆ ಟಾಕ್ಸಿಕ್ ಚಿತ್ರವನ್ನು ಜೂನ್ 4 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್ನಲ್ಲಿ ನಡೆದ ಪ್ರತಿಷ್ಠಿತ ‘ಸಿನೆಮಾಕಾನ್’ ಈವೆಂಟ್ನಲ್ಲಿ ಟಾಕ್ಸಿಕ್ ಚಿತ್ರದ ಪ್ರೆಸೆಂಟೇಶನ್ಗೆ ಜಾಗತಿಕ ವಿತರಕರು ಮತ್ತು ಚಿತ್ರೋದ್ಯಮದ ಪ್ರಮುಖರಿಂದ ಭರ್ಜರಿ ಮತ್ತು ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಜಾಗತಿಕ ಮಾರುಕಟ್ಟೆಯ ಬೇಡಿಕೆ ಮತ್ತು ಚಿತ್ರದ ವಿಸ್ತಾರವನ್ನು ಪರಿಗಣಿಸಿ, ಚಿತ್ರವನ್ನು ವಿಶ್ವದಾದ್ಯಂತ ಏಕಕಾಲದಲ್ಲಿ ಅತ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವ ಉದ್ದೇಶದಿಂದ ದಿನಾಂಕವನ್ನು ಮರುಹೊಂದಿಸಲು ನಿರ್ಧರಿಸಲಾಗಿದೆ ಎಂದು ಯಶ್ ಅಧಿಕೃತವಾಗಿ ತಿಳಿಸಿದ್ದಾರೆ.

