ಬೆಂಗಳೂರು: ರಾಜ್ಕುಮಾರ್ ಮೊಮ್ಮಗ ಯುವ ರಾಜ್ಕುಮಾರ್ ಮತ್ತು ಸೊಸೆ ಶ್ರೀದೇವಿ ಭೈರಪ್ಪರವರ ವಿಚ್ಛೇದನ ಅರ್ಜಿಯನ್ನು ಕೋರ್ಟ್ ಇಂದು ವಿಚಾರಣೆ ನಡೆಯಲಿದೆ. ಆದರೆ ಡಿವೋರ್ಸ್ ಅರ್ಜಿ ವಿಚಾರಣೆಗೆ ಮುನ್ನ ಶ್ರೀದೇವಿಯವರು ಸಾಮಾಜಿಕ ಜಾಲತಾಣದಲ್ಲಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.
ಶ್ರೀದೇವಿಯವರು ‘ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತೆ ಎಂದು ನಾನು ನಂಬಿದ್ದೇನೆ’ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ವೈರಲ್ ಆಗುತ್ತಿದೆ.
ನಟ ರಾಘವೇಂದ್ರ ರಾಜ್ಕುಮಾರ್ರವರ ಮಗ ಯುವರಾಜ್ ಕುಮಾರ್ ಜೂನ್ 6ನೇ ತಾರೀಖು ಡಿವೋರ್ಸ್ಗೆ ಅರ್ಜಿ ಹಾಕಿದ್ದರು. ಕೋರ್ಟ್ ಮೆಟ್ಟಿಲೇರಿದ್ದರು. ಮಾತ್ರವಲ್ಲದೆ ಪತ್ನಿಯ ಕುರಿತಾಗಿ ಅನೇಕ ಆರೋಪಗಳನ್ನು ಮಾಡಿದ್ದರು. ಹೀಗಾಗಿ ಫ್ಯಾಮಿಲಿ ಕೋರ್ಟ್ ಮುಂದಿನ ವಿಚಾರಣೆಯನ್ನ ಜುಲೈ 4ಕ್ಕೆ ಮುಂದೂಡಿತ್ತು. ಅದರಂತೆಯೇ ಇಂದು ವಿಚಾರಣೆ ನಡೆಯಲಿದೆ.
ಈಗಾಗಲೇ ಡಿವೋರ್ಸ್ ವಿಚಾರವಾಗಿ ಶ್ರೀದೇವಿ ವಿದೇಶದಿಂದ ಬೆಂಗಳೂರಿಗೆ ಬಂದಿದ್ದಾರೆ. ಇಂದು ಫ್ಯಾಮಿಲಿ ಕೋರ್ಟ್ಗೆ ಹಾಜರಾಗುವ ಮೂಲಕ ವಿಚಾರಣೆ ಎದುರಿಸಲಿದ್ದಾರೆ.

