ಬೆಂಗಳೂರು: ಸ್ಯಾಂಡಲ್‌ವುಡ್ ನಟ ಯುವ ರಾಜ್‌ಕುಮಾರ್ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆ ಆಗಸ್ಟ್ 23ಕ್ಕೆ ಮುಂದೂಡಿಕೆಯಾಗಿದೆ.
ಈ ಮನವಿಗೆ ನ್ಯಾಯಾಧೀಶರು, ಇದು ಕೌಟುಂಬಿಕ ಕಲಹವಾಗಿರುವ ಕಾರಣ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಮೊದಲು ಕೌನ್ಸಿಲಿಂಗ್ ಮುಕ್ತಾಯವಾಗಬೇಕು.ಕೌನ್ಸಿಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ನ್ಯಾಯಾಧೀಶರು ಹೇಳಿದರು. ಅಂತಿಮವಾಗಿ ಕೋರ್ಟ್ ಆಗಸ್ಟ್ 23ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿತು.
ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಛೇದನ ಕೊಡಲು ಮುಂದಾಗಿದ್ದಾರೆ. ಯುವ ರಾಜ್ ಕುಮಾರ್ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಯುವ ರಾಜ್ ಕುಮಾರ್ ಅವರು ಪತ್ನಿಯ ವಿರುದ್ಧ ಕ್ರೌರ್ಯ, ಅಗೌರವದಿಂದ ನೋಡಿಕೊಂಡ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಪತ್ನಿಯಿಂದ ನಾನು ಮಾನಸಿಕವಾಗಿ ಟಾರ್ಚರ್ ಅನುಭವಿಸಿದ್ದೇನೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

