Showing 20 of 841 posts • Page 7 of 43
ʼಅಪ್ಪು ಉತ್ಸವʼ ಇದು ನಿಮ್ಮ ವಾಹಿನಿ ಕಲಾ ವೇದಿಕೆ (ರಿ) ವತಿಯಿಂದ ಆಯೋಜಿಸಲಾಗಿದ್ದು, ರಾಯಭಾರಿಯಾಗಿ ನೆನಪಿರಲಿ ಪ್ರೇಮ್ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರೇಮ್ ಮಾತನಾಡಿ 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಖುಷಿ ತಂದಿದೆ ಎಂದು ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೆ.ವಿ. ಭಾಗವಹಿಸಿದ್ದರು.
ಇತ್ತೀಚೆಗೆ ಪ್ರೇಕ್ಷಕರು ಥಿಯೇಟರ್ಗೆ ಹೋಗಿ ಸಿನಿಮಾ ನೋಡುವುದು ಹೆಚ್ಚಾಗುತ್ತಿದೆ. ಟಿಕೆಟ್ಗೆ ಹಣ ನೀಡುವುದು ಮಾತ್ರವಲ್ಲದೆ, ಮಲ್ಟಿಫ್ಲೆಕ್ಸ್ನಲ್ಲಿ ಪಾರ್ಕಿಂಗ್, ಪಾಪ್ಕಾರ್ನ್ಗೂ ಭಾರೀ ಹಣವನ್ನು ನೀಡಬೇಕಾಗುತ್ತದೆ. ಆದರೆ ಈ ವಿಚಾರದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಇನ್ಮುಂದೆ ಥಿಯೇಟರ್ ಆವರಣದಲ್ಲಿ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕ ನೀಡಬೇಕಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ.
ಆದಿತ್ಯ ಧರ್ ನಿರ್ದೇಶನ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಸಿನಿಮಾದ ಟ್ರೇಲರ್ ಇಂದು (ಮಾರ್ಚ್ 7) ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ಬಗ್ಗೆ ನಟ ರಣವೀರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ
ಸ್ಯಾಂಡಲ್ವುಡ್ನ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ಹಠಾತ್ ನಿಧನರಾಗಿದ್ದಾರೆ.
ಬೆದರಿಕೆ ಹಾಗೂ ನಿಂದನೆ ಆರೋಪದಡಿ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಕೆ.ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜಾಗತಿಕ ರಾಜಕೀಯ ಬಿಕ್ಕಟ್ಟಿನಿಂದಾಗಿ ಮಾರ್ಚ್ 19 ರಂದು ಬಿಡುಗಡೆಯಾಗಬೇಕಿದ್ದ ಯಶ್ ಅವರ ಟಾಕ್ಸಿಕ್ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದೆ.
ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೆ ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ. ತೆಲುಗಿನ 44 ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವುದಾಗಿ ಘೋಷಿಸಿದ್ದಾರೆ.
ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಪತ್ನಿ ಮತ್ತು ಮಕ್ಕಳೊಂದಿಗೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಭೇಟಿ ನೀಡಿದರು.
ನಟ ಮತ್ತು ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ಪತ್ನಿ ಸಂಗೀತಾ ಸೊರ್ನಲಿಂಗಂ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ನಟನ ಜೊತೆಗಿನ 27 ವರ್ಷಗಳ ದಾಂಪತ್ಯವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. 1999 ರ ಆಗಸ್ಟ್ನಲ್ಲಿ ವಿವಾಹವಾದ ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಶಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ವಿಜಯ್ ಅವರು ನಟಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆಂದು ಪತ್ನಿ ಆರೋಪಿಸಿದ್ದಾರೆ. ಈ ಸಂಬಂಧ ನಿಲ್ಲಿಸುತ್ತೇನೆ ಅಂತ ವಿಜಯ್ ಭರವಸೆ ಕೊಟ್ಟಿದ್ದರು. ಆದರೆ, ಅದು ಹಾಗೆಯೇ […]
ಕಾಂತಾರದ ವರಾಹರೂಪಂ ಖ್ಯಾತಿಯ ಸಾಯಿ ವಿಘ್ನೇಶ್ ಹಾಗೂ ಪತ್ನಿ ಖ್ಯಾತ ಭರತನಾಟ್ಯ ಕಲಾವಿದೆ ಕಾವ್ಯ ಮುರಳೀಧರನ್ ಅವರು ವಿವಾಹದ ಬಳಿಕ ಪ್ರಥಮ ಬಾರಿಗೆ ಕೃಷ್ಣಮಠಕ್ಕೆ ಆಗಮಿಸಿ ಕೃಷ್ಣನ ದರ್ಶನ ಪಡೆದರು.
ಧನ್ವೀರ್ ಗೌಡ ಅಭಿನಯದ ಹಯಗ್ರೀವ ಫೆಬ್ರವರಿ 27ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಫೆ.26 ರಂದು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಸಪ್ತಪದಿ ತುಳಿಯಲಿದ್ದು, ಮದುವೆ ಆಮಂತ್ರಣವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ.
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ದಂಪತಿ ಭೇಟಿ ನೀಡಿ, ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಭೇಟಿ ನೀಡಿ ದೇವರ ದರ್ಶನ ಮಾಡಿದರು. ಬಳಿಕ ಪರ್ಯಾಯ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿ ಮಾಡಿ ಫಲ ಮಂತ್ರಾಕ್ಷತೆಯನ್ನು ಪಡೆದುಕೊಂಡರು.
ರಾಕಿಂಗ್ ಸ್ಟಾರ್ ಯಶ್ ನಟಿಸಿ, ನಿರ್ಮಿಸಿರುವ ಟಾಕ್ಸಿಕ್ ಸಿನಿಮಾ ಮತ್ತೊಂದು ರಣರೋಚಕ ಟೀಸರ್ ರಿಲೀಸ್ ಆಗಿದೆ. `ರಾಯ’ ಪಾತ್ರದ ಅನಾವರಣ ಮಾಡಿದ್ದ ಟೀಸರ್ ಬಳಿಕ ಮತ್ತೊಂದು ಆಕರ್ಷಕ ಟೀಸರ್ ರಿಲೀಸ್ ಇಂದು ಆಗಿದೆ.
ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದಿದ್ದಾರೆ.
ಬಾಲಿವುಡ್ ನಟ ರಣವೀರ್ ಸಿಂಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಮತ್ತೆ ಬೆದರಿಕೆ ಬಂದಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಫಿಲಂ ಚೇಂಬರ್ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ.
ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ. ಆರ್. ರೆಹಮಾನ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ ರಾಜ್ಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಹೇಳಿಕೆ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.