News Karnataka Kannada
Monday, April 29 2024
ಇತರೆ

ಸ್ತನ ಕ್ಯಾನ್ಸರ್ ಪ್ರಕರಣ ಏರಿಕೆ: ದೇಶದಲ್ಲೇ ಬೆಂಗಳೂರಿಗೆ ಎರಡನೇ ಸ್ಥಾನ

Breast Cancer
Photo Credit :

ಇತ್ತೀಚಿನ ದಿನಗಳಲ್ಲಿ ಯುವತಿಯರನ್ನು ಹೆಚ್ಚಾಗಿ ಕಾಡುತ್ತಿರುವ ಸಮಸ್ಯೆ ಸ್ತನ ಕ್ಯಾನ್ಸರ್. ರಾಜ್ಯದಲ್ಲಿ ವಾರ್ಷಿಕ 9 ಸಾವಿರಕ್ಕೂ ಹೆಚ್ಚು ಸ್ತನ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ಸ್ತನ ಕ್ಯಾನ್ಸರ್ ಪ್ರಕರಣದ ಏರಿಕೆಯಲ್ಲಿ ರಾಜಧಾನಿ ಬೆಂಗಳೂರು ಇಡೀ ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ಚೆನ್ನೈ ಮೊದಲ ಸ್ಥಾನ ಪಡೆದಿದೆ. ಕಿದ್ವೈ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಕುರಿತು ಅಧ್ಯಯನ ನಡೆಸಿದ್ದು, ಯುವತಿಯರಲ್ಲಿ ಸ್ತನ ಕ್ಯಾನ್ಸರ್ ಸಮಸ್ಯೆ ಕಾಣಿಸುತ್ತಿರುವುದಕ್ಕೆ ಮದ್ಯಪಾನ ಹಾಗೂ ಧೂಮಪಾನ ಪ್ರಮುಖ ಕಾರಣ ಎನ್ನುವ ಅಂಶ ಬೆಳಕಿಗೆ ಬಂದಿದೆ.

ವಯಸ್ಸಾದ ನಂತರ ಮದುವೆಯಾಗುವುದು, ಮಾರ್ಡನ್ ಜೀವನ ಶೈಲಿ, ಪಾಶ್ಚಿಮಾತ್ಯ ಡಯಟ್ ಪ್ಲಾನ್‌ಗಳು ಸ್ತನ ಕ್ಯಾನ್ಸರ್‌ಗೆ ಕಾರಣವಾಗಿವೆ. ರಾಜ್ಯದಲ್ಲಿ ಪ್ರತಿ ವರ್ಷ 9-10 ಸಾವಿರ ಯುವತಿಯರಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದ್ದು, ಪ್ರಸ್ತುತ 26-30 ಸಾವಿರ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ 1,668 ಮಂದಿ ಇದೀಗ ಸ್ತನ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 2008 ರಲ್ಲಿ ಪ್ರತಿ ಒಂದು ಲಕ್ಷ ಮಹಿಳೆಯರಲ್ಲಿ ಒಟ್ಟು 34 ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಬಾಧಿಸಿತ್ತು. ಇದೀಗ ಒಂದು ಲಕ್ಷ ಮಹಿಳೆಯರಲ್ಲಿ 40 ಮಂದಿಗೆ ಕ್ಯಾನ್ಸರ್ ಬಾಧಿಸುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು