ಬೇಕಾಗುವ ಪದಾರ್ಥಗಳು:
10 ಸಣ್ಣ ಬಾಳೆಹಣ್ಣು, 2 ಕಪ್ ತೆಂಗಿನತುರಿ ಅಥವಾ 1 ಕಪ್ ಗಟ್ಟಿ ತೆಂಗಿನಕಾಯಿ ಹಾಲು, 1 ಕಪ್ ನೀರು (ಕಾಯಿಹಾಲು ತೆಗೆಯಲು), 1/2 ಕಪ್ ಬೆಲ್ಲ (ಅಥವಾ ನಿಮ್ಮ ರುಚಿಗೆ ತಕ್ಕಷ್ಟು), ಚಿಟಿಕೆ ಉಪ್ಪು, ದೊಡ್ಡ ಚಿಟಿಕೆ ಏಲಕ್ಕಿ.
ಬಾಳೆ ಹಣ್ಣಿನ ರಸಾಯನ ಮಾಡುವ ವಿಧಾನ:
ಬಾಳೆ ಹಣ್ಣು ಸಿಪ್ಪೆ ತೆಗೆದು, ಸಣ್ಣದಾಗಿ ಕತ್ತರಿಸಿ. ಆಮೇಲೆ ಪುಡಿ ಮಾಡಿದ ಬೆಲ್ಲ ಸೇರಿಸಿ. ಚಿಟಿಕೆ ಉಪ್ಪು ಹಾಕಿ. ಚೆನ್ನಾಗಿ ಕಲಸಿ. ತೆಂಗಿನ ತುರಿಯನ್ನು ಮಿಕ್ಸಿ ಜಾರಿಗೆ ಹಾಕಿ, ಅಗತ್ಯವಿದ್ದಷ್ಟು ನೀರು ಸೇರಿಸಿ, ನುಣ್ಣನೆ ಅರೆಯಿರಿ. ಅರೆದ ಮಿಶ್ರಣವನ್ನು ಬಟ್ಟೆಯಲ್ಲಿ ಹಿಂಡಿ, ಕಾಯಿ ಹಾಲನ್ನು ತೆಗೆದು, ಬಾಳೆಹಣ್ಣು ಮತ್ತು ಬೆಲ್ಲ ಇರುವ ಪಾತ್ರೆಗೆ ಹಾಕಿ. ಏಲಕ್ಕಿ ಪುಡಿ ಹಾಕಿ ಕಲಸಿ.
ನೀರು ದೋಸೆ, ತೆಳು ಅವಲಕ್ಕಿ ಅಥವಾ ಒತ್ತು ಶಾವಿಗೆಯೊಂದಿಗೆ ಬಡಿಸಿ.