News Karnataka Kannada
Friday, May 03 2024
ಅಡುಗೆ ಮನೆ

ಆಲೂ ಪಾಲಕ್ ಕಟ್ಲೆಟ್ ರೆಸಿಪಿ ನಿಮಗೂ ಬೇಕಾ? ಇಲ್ಲಿದೆ ನೋಡಿ

ಚಳಿಯ ವಾತಾವರಣದಲ್ಲಿ ಬಿಸಿಬಿಸಿಯಾಗಿ ಏನಾದರೂ ತಿನ್ನಬೇಕು ಅಂತಾ ಅನಿಸುವುದು ಸಹಜ. ಇವತ್ತು ನಾವು  ಟೇಸ್ಟಿಯಾದ ಆಲೂ ಪಾಲಕ್ ಕಟ್ಲೆಟ್ ಯಾವ ರೀತಿ ಮಾಡುವುದು ಎಂಬುದನ್ನು ನೋಡೋಣ. ಆಲೂ ಪಾಲಕ್ ಕಟ್ಲೆಟ್ ಅನ್ನು ಮಕ್ಕಳು ಮಾತ್ರವಲ್ಲದೇ ದೊಡ್ಡವರೂ ಕೂಡ ಇಷ್ಟಪಡುತ್ತಾರೆ.
Photo Credit : News Kannada

ಚಳಿಯ ವಾತಾವರಣದಲ್ಲಿ ಬಿಸಿಬಿಸಿಯಾಗಿ ಏನಾದರೂ ತಿನ್ನಬೇಕು ಅಂತಾ ಅನಿಸುವುದು ಸಹಜ. ಇವತ್ತು ನಾವು  ಟೇಸ್ಟಿಯಾದ ಆಲೂ ಪಾಲಕ್ ಕಟ್ಲೆಟ್ ಯಾವ ರೀತಿ ಮಾಡುವುದು ಎಂಬುದನ್ನು ನೋಡೋಣ. ಆಲೂ ಪಾಲಕ್ ಕಟ್ಲೆಟ್ ಅನ್ನು ಮಕ್ಕಳು ಮಾತ್ರವಲ್ಲದೇ ದೊಡ್ಡವರೂ ಕೂಡ ಇಷ್ಟಪಡುತ್ತಾರೆ.

ಬೇಕಾಗುವ ಸಾಮಗ್ರಿಗಳು:
ಆಲೂಗಡ್ಡೆ – 2
ಪಾಲಕ್ ಸೊಪ್ಪು – 1 ಕಪ್
ಈರುಳ್ಳಿ – 1
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಜೀರಿಗೆ – 1/4 ಚಮಚ
ಗರಂ ಮಸಾಲಾ – 1 ಚಮಚ
ಅರಿಶಿನ ಪುಡಿ – ಒಂದು ಚಿಟಿಕೆ
ಅಕ್ಕಿ ಹಿಟ್ಟು – 1 ಚಮಚ
ಮೆಣಸಿನ ಪುಡಿ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು

ಮಾಡುವ ವಿಧಾನ: ಮೊದಲು, ಆಲೂಗಡ್ಡೆಯನ್ನು ಬೇಯಿಸಿ ಅವುಗಳ ಸಿಪ್ಪೆ ತೆಗೆದು ಆರಲು ಬಿಡಿ. ಬಳಿಕ ಈರುಳ್ಳಿ ಮತ್ತು ಪಾಲಕ್ ಸೊಪ್ಪನ್ನು ತೊಳೆದು ಸ್ವಚ್ಛಗೊಳಿಸಿ ಸಣ್ಣದಾಗಿ ಹೆಚ್ಚಿಕೊಳ್ಳಿ. ಈಗ ಅಗಲವಾದ ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಮ್ಯಾಶ್ ಮಾಡಿ. ನಂತರ ಸಣ್ಣಗೆ ಹೆಚ್ಚಿದ ಈರುಳ್ಳಿ, ಪಾಲಕ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಜೀರಿಗೆ, ಗರಂ ಮಸಾಲ, ಅರಿಶಿನ ಪುಡಿ, ಮೆಣಸಿನ ಪುಡಿ, ಅಕ್ಕಿ ಹಿಟ್ಟು, ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.

ಕಟ್ಲೆಟ್‌ಗಳನ್ನು ಹುರಿಯಲು ದೊಡ್ಡ ಬಾಣಲೆಯಲ್ಲಿ ಬೇಕಾದಷ್ಟು ಎಣ್ಣೆ ಹಾಕಿ. ಎಣ್ಣೆ ಚೆನ್ನಾಗಿ ಕಾಯುತ್ತಿದ್ದಂತೆ ತಯಾರಾದ ಕಟ್ಲೆಟ್ ಮಿಶ್ರಣವನ್ನು ಬೇಕಾದ ಆಕಾರದಲ್ಲಿ ಮಾಡಿಕೊಂಡು ಎಣ್ಣೆಗೆ ಹಾಕಿ ಕಂದು ಬಣ್ಣ ಬರುವವರೆಗೆ ಕಾಯಿಸಿಕೊಂಡರೆ ಬಿಸಿ ಬಿಸಿಯಾದ ಆಲೂ ಪಾಲಕ್ ಕಟ್ಲೆಟ್ ಸವಿಯಲು ಸಿದ್ಧ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು