ಚಳಿಯ ವಾತಾವರಣದಲ್ಲಿ ಬಿಸಿಬಿಸಿಯಾಗಿ ಏನಾದರೂ ತಿನ್ನಬೇಕು ಅಂತಾ ಅನಿಸುವುದು ಸಹಜ. ಇವತ್ತು ನಾವು ಟೇಸ್ಟಿಯಾದ ಆಲೂ ಪಾಲಕ್ ಕಟ್ಲೆಟ್ ಯಾವ ರೀತಿ ಮಾಡುವುದು ಎಂಬುದನ್ನು ನೋಡೋಣ. ಆಲೂ ಪಾಲಕ್ ಕಟ್ಲೆಟ್ ಅನ್ನು ಮಕ್ಕಳು ಮಾತ್ರವಲ್ಲದೇ ದೊಡ್ಡವರೂ ಕೂಡ ಇಷ್ಟಪಡುತ್ತಾರೆ.
ಬೇಕಾಗುವ ಸಾಮಗ್ರಿಗಳು:
ಆಲೂಗಡ್ಡೆ – 2
ಪಾಲಕ್ ಸೊಪ್ಪು – 1 ಕಪ್
ಈರುಳ್ಳಿ – 1
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
ಜೀರಿಗೆ – 1/4 ಚಮಚ
ಗರಂ ಮಸಾಲಾ – 1 ಚಮಚ
ಅರಿಶಿನ ಪುಡಿ – ಒಂದು ಚಿಟಿಕೆ
ಅಕ್ಕಿ ಹಿಟ್ಟು – 1 ಚಮಚ
ಮೆಣಸಿನ ಪುಡಿ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಮಾಡುವ ವಿಧಾನ: ಮೊದಲು, ಆಲೂಗಡ್ಡೆಯನ್ನು ಬೇಯಿಸಿ ಅವುಗಳ ಸಿಪ್ಪೆ ತೆಗೆದು ಆರಲು ಬಿಡಿ. ಬಳಿಕ ಈರುಳ್ಳಿ ಮತ್ತು ಪಾಲಕ್ ಸೊಪ್ಪನ್ನು ತೊಳೆದು ಸ್ವಚ್ಛಗೊಳಿಸಿ ಸಣ್ಣದಾಗಿ ಹೆಚ್ಚಿಕೊಳ್ಳಿ. ಈಗ ಅಗಲವಾದ ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಮ್ಯಾಶ್ ಮಾಡಿ. ನಂತರ ಸಣ್ಣಗೆ ಹೆಚ್ಚಿದ ಈರುಳ್ಳಿ, ಪಾಲಕ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಜೀರಿಗೆ, ಗರಂ ಮಸಾಲ, ಅರಿಶಿನ ಪುಡಿ, ಮೆಣಸಿನ ಪುಡಿ, ಅಕ್ಕಿ ಹಿಟ್ಟು, ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.
ಕಟ್ಲೆಟ್ಗಳನ್ನು ಹುರಿಯಲು ದೊಡ್ಡ ಬಾಣಲೆಯಲ್ಲಿ ಬೇಕಾದಷ್ಟು ಎಣ್ಣೆ ಹಾಕಿ. ಎಣ್ಣೆ ಚೆನ್ನಾಗಿ ಕಾಯುತ್ತಿದ್ದಂತೆ ತಯಾರಾದ ಕಟ್ಲೆಟ್ ಮಿಶ್ರಣವನ್ನು ಬೇಕಾದ ಆಕಾರದಲ್ಲಿ ಮಾಡಿಕೊಂಡು ಎಣ್ಣೆಗೆ ಹಾಕಿ ಕಂದು ಬಣ್ಣ ಬರುವವರೆಗೆ ಕಾಯಿಸಿಕೊಂಡರೆ ಬಿಸಿ ಬಿಸಿಯಾದ ಆಲೂ ಪಾಲಕ್ ಕಟ್ಲೆಟ್ ಸವಿಯಲು ಸಿದ್ಧ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…