ಬೀಟ್‌ರೂಟ್ ಹಲ್ವಾ ಸುಲಭವಾಗಿ ಯಾವ ರೀತಿ ಮಾಡುವುದು?

ದಿಢೀರ್ ಎಂದು ಅತಿಥಿಗಳು ಮನೆಗೆ ಬಂದ ಸಂದರ್ಭ ಏನು ಸ್ಪೆಷಲ್ ಮಾಡುವುದು ಎಂಬ ಆತಂಕ ಎಲ್ಲರಿಗೂ ಮೂಡುತ್ತದೆ. ಅದಕ್ಕಾಗಿ ಬೇಗನೆ ತಯಾರಾಗುವ ಬೀಟ್‌ರೂಟ್ ಹಲ್ವಾ ಯಾವ ರೀತಿ ಮಾಡುವುದು ಎಂಬುದನ್ನು ನೋಡೋಣ..

ಬೇಕಾಗುವ ಸಾಮಗ್ರಿಗಳು:
ಬೀಟ್‌ರೂಟ್ – 4
ಹಾಲು – 2 ಕಪ್
ಸಕ್ಕರೆ – 2 ಕಪ್
ಏಲಕ್ಕಿ ಪುಡಿ – 1 ಚಮಚ
ತುಪ್ಪ – 3 ಚಮಚ
ಗೋಡಂಬಿ – ಸ್ವಲ್ಪ
ಒಣ ದ್ರಾಕ್ಷಿ – ಸ್ವಲ್ಪ
ಬಾದಾಮಿ – ಸ್ವಲ್ಪ
ಕೋವಾ – 100 ಗ್ರಾಂ

ಮಾಡುವ ವಿಧಾನ: ಮೊದಲಿಗೆ ಬೀಟ್‌ರೂಟ್ ಅನ್ನು ಚೆನ್ನಾಗಿ ತೊಳೆದು, ಸಿಪ್ಪೆ ಸುಲಿದು ತುರಿದುಕೊಳ್ಳಿ.

ಈಗ ಒಂದು ಬಾಣಾಲೆಯಲ್ಲಿ ತುಪ್ಪ ಹಾಕಿಕೊಂಡು ಬಿಸಿಯಾದ ಬಳಿಕ ಅದಕ್ಕೆ ಗೋಡಂಬಿ, ಬಾದಾಮಿ ಹಾಗೂ ಒಣದ್ರಾಕ್ಷಿಗಳನ್ನು ಹಾಕಿಕೊಂಡು ಸ್ವಲ್ಪಹೊತ್ತು ಹುರಿದುಕೊಳ್ಳಿ. ನಂತರ ಅದನ್ನು ಬಾಣಾಲೆಯಿಂದ ತೆಗೆದು ಒಂದು ತಟ್ಟೆಯಲ್ಲಿ ಹಾಕಿ. ಬಳಿಕ ಅದೇ ಬಾಣಾಲೆಗೆ ತುರಿದ ಬೀಟ್‌ರೂಟ್ ಅನ್ನು ಹಾಕಿಕೊಂಡು ಸ್ವಲ್ಪ ಹೊತ್ತು ಚನ್ನಾಗಿ ಹುರಿದುಕೊಳ್ಳಿ. ನಂತರ ಅದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿಕೊಂಡು ಮತ್ತೆ ಹುರಿದುಕೊಳ್ಳಿ. ಬಳಿಕ ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಂಡು,  ಇದನ್ನು ಒಂದು ಬೌಲ್‌ಗೆ ಹಾಕಿ ಗೋಡಂಬಿ, ಬಾದಾಮಿ ಹಾಗೂ ಒಣದ್ರಾಕ್ಷಿಗಳಿಂದ ಅಲಂಕರಿಸಿ ದರೆ ಬಿಸಿಬಿಸಿಯಾದ ಬೀಟ್‌ರೂಟ್ ಹಲ್ವಾ ಸವಿಯಲು ಸಿದ್ದ

Ashika S

Recent Posts

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

21 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

33 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

49 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

1 hour ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago