ಹೀರೆಕಾಯಿ ಸಿಪ್ಪೆಯಿಂದ ಚಟ್ನಿ ಮಾಡುವ ಸರಳ ವಿಧಾನ

ಚಟ್ನಿಯಲ್ಲಿ ಹಲವು ಬಗೆಗಳಿವೆ. ಟೊಮೆಟೊ, ಈರುಳ್ಳಿ, ಶೇಂಗಾ ಚಟ್ನಿಯನ್ನು ಮಾಡಲಾಗುತ್ತದೆ, ಆದರೆ ಹೀರೆಕಾಯಿ ಸಿಪ್ಪೆಯಿಂದ ಚಟ್ನಿಯನ್ನು ತಯಾರಿಸಬಹುದು. ನಾವು ಇಂದು ಹೀರೆಕಾಯಿ ಸಿಪ್ಪೆಯಿಂದ ಚಟ್ನಿಯನ್ನು ಮಾಡುವ ಸರಳ ವಿಧಾನ ನೋಡೋಣ.

ಬೇಕಾಗುವ ಸಾಮಗ್ರಿಗಳು:
* ಹೀರೆಕಾಯಿ ಸಿಪ್ಪೆ-1 ಕಪ್
* ಒಣ ಮೆಣಸು 4-5
* ಉದ್ದಿನ ಬೇಳೆ -ಅರ್ಧ ಚಮಚ
* ತೆಂಗಿನ ತುರಿ – ಅರ್ಧ ಕಪ್
* ಹುಣಸೆ ಹಣ್ಣು- ಸ್ವಲ್ಪ
* ರುಚಿಗೆ ತಕ್ಕ ಉಪ್ಪು
* ಇಂಗು ಚಿಟಿಕೆಯಷ್ಟು
* ಕರಿಬೇವಿನ ಎಲೆ

ಮಾಡುವ ವಿಧಾನ: ಹೀರೆಕಾಯಿ ಸಿಪ್ಪೆಯನ್ನು ಚಿಕ್ಕ ಬಾಣಲೆಯಲ್ಲಿ ಹಾಕಿ ಸ್ವಲ್ಪ ಎಣ್ಣೆ ಹಾಕಿ ಹುರಿಯಬೇಕು. ನಂತರ ಅದನ್ನು ತಟ್ಟೆಗೆ ತೆಗೆದಿಟ್ಟು, ಅದೇ ಬಾಣಲೆಗೆ ಒಂದು ಚಮಚ ಎಣ್ಣೆ ಹಾಕಿ. ಎಣ್ಣೆ ಕಾದ ಕೂಡಲೇ ಸ್ವಲ್ಪ ಉದ್ದಿನಬೇಳೆ, ಒಣಮೆಣಸು ಹಾಕಿ ಹುರಿಯಬೇಕು.

ಹುರಿದು ಹೀರೆಕಾಯಿ ಸಿಪ್ಪೆ, ಒಮಮೆಣಸು, ಉದ್ದಿನಬೇಳೆ, ಹುಣಸೆಹಣ್ಣು, ತೆಂಗಿನಕಾಯಿ ಸೇರಿಸಿ ಮಿಕ್ಸಿಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು. ನಂತರ ಒಗ್ಗರಣೆಗೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ ಇದಕ್ಕೆ ಚಿಟಿಕೆಯಷ್ಟು ಇಂಗು ಮತ್ತು ಕರಿಬೇವಿನ ಎಲೆ ಹಾಕಿ ಚಟ್ನಿಗೆ ಒಗ್ಗರಣೆ ಕೊಟ್ಟರೆ ಹೀರೆಕಾಯಿ ಸಿಪ್ಪೆ ಚಟ್ನಿ ಸವಿಯಲು ಸಿದ್ಧ.

Ashika S

Recent Posts

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

10 mins ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

24 mins ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

35 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

46 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

1 hour ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

2 hours ago