ಮನೆಯಲ್ಲೇ ತಯಾರಾಗುತ್ತೆ ಸ್ವಾದಿಷ್ಟ ಚಿಕನ್ ಬರ್ಗರ್

ಬರ್ಗರ್ ಯಾರಿಗೆ ಇಷ್ಟ ಇಲ್ಲ ಹೇಳಿ. ಅದು ವೆಜ್ ಆಗಿರಲಿ ಅಥವಾ ನಾನ್ ವೆಜ್ ಆಗಿರಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಬರ್ಗರ್ ತಿನ್ನಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಹಾಗಂತ ಹೇಳಿ ಅಂಗಡಿಯಿಂದ ತಿನ್ನುವುದು ನಮ್ಮ ಆರೋಗ್ಯಕ್ಕೆ ಉತ್ತಮವಲ್ಲ. ಸುಲಭವಾಗಿ ಮನೆಯಲ್ಲೇ ಚಿಕನ್ ಬರ್ಗರ್ ಮಾಡುವುದು ಹೇಗೆ ಎಂದು ನೋಡೋಣ.

ಬೇಕಾಗುವ ಸಾಮಗ್ರಿಗಳು:
ಚಿಕನ್ ಖೀಮಾ – 100 ಗ್ರಾಂ
ಬರ್ಗರ್ ಬನ್ – 4
ಬ್ರೆಡ್ ಕ್ರಂಬ್ಸ್ – 1 ಕಪ್
ಬೆಳ್ಳುಳ್ಳಿ ಪೇಸ್ಟ್ – ಅರ್ಧ ಚಮಚ
ವೃತ್ತಾಕಾರದಲ್ಲಿ ಹೆಚ್ಚಿದ ಟೊಮೆಟೋ – 2
ವೃತ್ತಾಕಾರದಲ್ಲಿ ಹೆಚ್ಚಿದ ಈರುಳ್ಳಿ – 2 (ಒಂದನ್ನು ಸಣ್ಣದಾಗಿ ಹೆಚ್ಚಿಕೊಳ್ಳಿ)
ಮಯೋನೀಸ್ – 2 ಚಮಚ
ಬೆಣ್ಣೆ – 2 ಚಮಚಮ
ಟೊಮೆಟೋ ಕೆಚಪ್ – 1 ಕಪ್
ಚೀಸ್ – 4
ಎಣ್ಣೆ – 2 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಕಾಳುಮೆಣಸಿನ ಪುಡಿ – ಅರ್ಧ ಚಮಚ
ಕೊತ್ತಂಬರಿ ಪುಡಿ – 1 ಚಮಚ

ಮಾಡುವ ವಿಧಾನ:

ಒಂದು ಪಾನ್ ನಲ್ಲಿ  ಚಿಕನ್ ಖೀಮಾ ಮತ್ತು ಬ್ರೆಡ್ ಟೋಸ್ಟ್ ಪುಡಿ, ಬೆಳ್ಳುಳ್ಳಿ ಪೇಸ್ಟ್, ಉಪ್ಪು, ಕಾಳುಮೆಣಸಿನ ಪುಡಿ, ಹೆಚ್ಚಿದ ಈರುಳ್ಳಿ, ಕೊತ್ತೊಂಬರಿ ಪುಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.  ನಾಲ್ಕು ಪಾಲು ಮಾಡಿ ಟಿಕ್ಕಿಯ ಆಕಾರ ಕೊಟ್ಟು ದಪ್ಪ ತಳದ ಬಾಣಲೆಯೊಂದರಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಈ ಟಿಕ್ಕಿಗಳನ್ನ ಎರಡು ಬದಿ ಕಂದು ಬಣ್ಣ ಬರುವವರೆಗೆ ಬೇಯಿಸಬೇಕು.

ನಂತರ ಈಗ ಸಾಸ್ ತಯಾರಿಸಲು ಮಯೋನಿಸ್ ಮತ್ತು ಟೊಮೆಟೊ ಕೆಚಪ್ ಅನ್ನ ಒಂದು ಬೌಲ್ ಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ. ಈಗ ಬನ್ ಗಳನ್ನ ಕತ್ತರಿಸಿ ಒಳಭಾಗಕ್ಕೆ ಬೆಣ್ಣೆ ಹಚ್ಚಿ ಕಾವಲಿಯ ಮೇಲೆ ಚಿಕ್ಕ ಉರಿಯಲ್ಲಿ ಬಿಸಿ ಮಾಡಿ.

ಬನ್ಗಳು ಗೋಲ್ಡನ್ ಬ್ರೌನ್ ಬಣ್ಣ ಬಂದ ನಂತರ ಅದಕ್ಕೆ ಟೊಮೆಟೊ ಕೆಚಪ್ ಮತ್ತೆ ಮೆಯೋನಿಸ್ ಮಿಶ್ರಣವನ್ನು ಹಚ್ಚಿ ಈ ಕತ್ತರಿಸಿದ ಈರುಳ್ಳಿ ಟೊಮೆಟೊ ಹಾಗೂ ಚೀಸ್ ಅನ್ನು ಹರಡಿ ಅದರ ಮೇಲೆ ಚಿಕನ್ ಟಿಕ್ಕಿಯನ್ನು ಇಟ್ಟು ಇನ್ನೊಂದು ಬಂನಿಂದ ಮುಚ್ಚಿದರೆ ರುಚಿರುಚಿಯಾದ ಚಿಕನ್ ಬರ್ಗರ್ ಸವಿಯಲು ಸಿದ್ಧ

Ashika S

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

4 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

28 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

41 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago