ಟೊಮೆಟೋ ಪ್ರೇಮಿಗಳಿಗಾಗಿ ಸಿಂಪಲ್ ಸ್ನ್ಯಾಕ್ಸ್ ರೆಸಿಪಿಯೊಂದನ್ನು ತಿಳಿದುಕೊಳ್ಳೋಣ. ಇಲ್ಲಿ ಹಸಿ ಟೊಮೆಟೋವನ್ನು ಬಳಸಲಾಗಿದ್ದು ಈ ಹಸಿ ಟೊಮೆಟೋ ಫ್ರೈ ಅನ್ನು ಮನೆಯಲ್ಲಿ ನೀವು ಕೂಡ ಟ್ರೈ ಮಾಡಿ ನೋಡಿ
ಬೇಕಾಗುವ ಪದಾರ್ಥಗಳು:
ತೆಳ್ಳಗೆ ಹೆಚ್ಚಿಕೊಂಡ ಗ್ರೀನ್ ಟೊಮೆಟೋ – 1 ಕೆಜಿ
ಬೀಟ್ ಮಾಡಿದ ಮೊಟ್ಟೆ – 2
ಬ್ರೆಡ್ ಕ್ರಂಬ್ಸ್ – 2-3 ಕಪ್
ಉಪ್ಪು – 1 ಟೀಸ್ಪೂನ್
ಮೆಣಸಿನ ಪುಡಿ – ಸ್ವಾದಕ್ಕನುಸಾರ
ಎಣ್ಣೆ – ಹುರಿಯಲು ಬೇಕಾಗುವಷ್ಟು
ಮಾಡುವ ವಿಧಾನ: ಮೊದಲಿಗೆ ಒಂದು ಬೌಲ್ನಲ್ಲಿ ಒಡೆದು ಬೀಟ್ ಮಾಡಿದ ಮೊಟ್ಟೆಯನ್ನು ಹಾಕಿಕೊಳ್ಳಿ. ಮತ್ತೊಂದು ಬಟ್ಟಲಿನಲ್ಲಿ ಉಪ್ಪು, ಮೆಣಸಿನ ಪುಡಿ ಹಾಗೂ ಬ್ರೆಡ್ ಕ್ರಂಬ್ಸ್ ಹಾಕಿ ಮಿಶ್ರಣ ಮಾಡಿ ಇಡಿ.
ಒಂದು ಪ್ಯಾನ್ಗೆ ಎಣ್ಣೆ ಸವರಿ, ಮಧ್ಯಮ ಶಾಖದ ಮೇಲೆ ಬಿಸಿ ಮಾಡಿ ಟೊಮೆಟೋ ಸ್ಲೈಸ್ಗಳನ್ನು ಮೊದಲು ಮೊಟ್ಟೆಯ ಮಿಶ್ರಣದಲ್ಲಿ ಅದ್ದಿ, ನಂತರ ಬ್ರೆಡ್ ಕ್ರಂಬ್ಸ್ ಮಿಶ್ರಣದಲ್ಲಿ ಉರುಳಿಸಿ, ಪ್ಯಾನ್ಗೆ ಹಾಕಿ, ಟೊಮೆಟೋಗಳ ಮೇಲೆ ಸ್ವಲ್ಪ ಎಣ್ಣೆ ಸಿಂಪಡಿಸಿ, 2 ನಿಮಿಷ ಕಾಯಿಸಿದ ಬಳಿಕ ತಿರುವಿ ಹಾಕಿ.
ಟೊಮೆಟೋಗಳ ಎರಡೂ ಬದಿ ಗೋಲ್ಡನ್ ಬ್ರೌನ್ ಬಣ್ಣ ಬಂದ ಬಳಿಕ ಪ್ಯಾನ್ನಿಂದ ತೆಗೆದು ಟಿಶ್ಯೂ ಪೇಪರ್ ಮೇಲೆ ಹರಡಿಕೊಂಡರೆ ರುಚಿಯಾದ ಹಸಿ ಟೊಮೆಟೋ ಫ್ರೈ ಸವಿಯಲು ಸಿದ್ದ.
ಇಂದು ರಾಜೀವ್ ಗಾಂಧಿ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ಗೆದ್ದು…
ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…
ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ದಾಖಲಾಗಿದೆ.ಶಾಸಕರು ತನ್ನ…
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.