News Karnataka Kannada
Monday, May 06 2024
ಅಡುಗೆ ಮನೆ

ಮಶ್ರೂಮ್ ಫ್ರೈಡ್‌ರೈಸ್ ಸುಲಭವಾಗಿ ಮಾಡುವುದು ಹೇಗೆ?

How to make mushroom fried rice easier?
Photo Credit : News Kannada

ಮಶ್ರೂಮ್ ಫ್ರೈಡ್‌ರೈಸ್ ಸುಲಭವಾಗಿ ಮಾಡುವುದು ಹೇಗೆ ನೋಡೊಣ

ಬೇಕಾಗುವ ಪದಾರ್ಥಗಳು

  • ಅನ್ನ – 1 ಬಟ್ಟಲು
  • ಅಣಬೆ – 150 ಗ್ರಾಂ
  • ಬೆಳ್ಳುಳ್ಳಿ – ಸ್ವಲ್ಪ (ಸಣ್ಣಗೆ ಹೆಚ್ಚಿದ್ದು)
  • ಈರುಳ್ಳಿ – ಅರ್ಧ ಬಟ್ಟಲು (ಸಣ್ಣಗೆ ಹೆಚ್ಚಿದ್ದು)
  • ಕೊತ್ತಂಬರಿ ಸೊಪ್ಪು – ಸ್ವಲ್ಪ
  • ಎಣ್ಣೆ – 2 ಚಮಚ
  • ಕಾಳುಮೆಣಸಿನ ಪುಡಿ – ಕಾಲು ಚಮಚ
  • ಉಪ್ಪು – ಅಗತ್ಯಕ್ಕೆ ತಕ್ಕಷ್ಟು

ಮಾಡುವ ವಿಧಾನ:  ಮೊದಲಿಗೆ ಒಂದು ಬಾಣಾಲೆಯಲ್ಲಿ ಎಣ್ಣೆ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ. ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್‌ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ.  ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿಯ ನಂತರ ಅದಕ್ಕೆ ಕಾಳುಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ.

ಬಳಿಕ ಈ ಮಿಶ್ರಣಕ್ಕೆ ಅನ್ನವನ್ನು ಹಾಕಿ  5ರಿಂದ 6 ನಿಮಿಷಗಳ ಕಾಲ ಚೆನ್ನಾಗಿ ಮಿಶ್ರಣ ಮಾಡಿ. ಈಗ ಮಶ್ರೂಮ್ ಫ್ರೈಡ್‌ರೈಸ್ ಸವಿಯಲು ಸಿದ್ಧ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು