ಸುಲಭವಾಗಿ ಸ್ವೀಟ್ ಕಾರ್ನ್ ಪಕೋಡ ಮಾಡುವುದು ಹೇಗೆ

ಸಂಜೆಯ ಕಾಫಿ ಜೊತೆಗೆ ಏನಾದರೂ ಕುರುಕು ತಿಂಡಿ ತಿನ್ನಲು ಇಷ್ಟಪಡುವವರೇ ಜಾಸ್ತಿ. ಸಂಜೆಯ ಹೊತ್ತು ಸುಲಭವಾಗಿ ತಯಾರಿಸಬಹುದಾದಂತ ಸ್ವೀಟ್ ಕಾರ್ನ್ ಪಕೋಡ ಮಾಡುವುದು ಹೇಗೆ ಎಂದು ನೋಡೋಣ.

ಬೇಕಾಗುವ ಪದಾರ್ಥಗಳು

  • ಸ್ವೀಟ್ ಕಾರ್ನ್- 1 ಬಟ್ಟಲು (ಬೇಯಿಸಿ ತರಿ ತರಿಯಾಗಿ ರುಬ್ಬಿದ್ದು)
  • ಈರುಳ್ಳಿ- 1  (ಸಣ್ಣಗೆ ಹೆಚ್ಚಿಕೊಂಡಿದ್ದು)
  • ಕಡಲೆಹಿಟ್ಟು- ಅರ್ಧ ಬಟ್ಟಲು
  • ಹಸಿಮೆಣಸಿನ ಕಾಯಿ- 2-3 (ಸಣ್ಣಗೆ ಹೆಚ್ಚಿಕೊಂಡಿದ್ದು)
  • ಅಕ್ಕಿ ಹಿಟ್ಟು-1 ಚಮಚ
  • ಅರಿಶಿನ – ಸ್ವಲ್ಪ
  • ಶುಂಠಿ, ಬೆಳ್ಳುಳ್ಳಿ ಪೇಸ್ಟ್ – 1 ಚಮಚ
  • ಚಾಟ್ ಮಸಾಲ- ಸ್ವಲ್ಪ
  • ಕೊತ್ತಂಬರಿ ಸೊಪ್ಪು- ಸ್ವಲ್ಪ (ಸಣ್ಣಗೆ ಹೆಚ್ಚಿಕೊಂಡಿದ್ದು)
  • ಕರಿಬೇವು- ಸ್ವಲ್ಪ (ಸಣ್ಣಗೆ ಹೆಚ್ಚಿಕೊಂಡಿದ್ದು)
  • ಜೀರಿಗೆ ಪುಡಿ- ಸ್ವಲ್ಪ
  • ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು
  • ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ: ಒಂದು ಬೌಲ್ ಗೆ ತರಿ ತರಿಯಾಗಿ ರುಬ್ಬಿದ ಕಾರ್ನ್, ಈರುಳ್ಳಿ, ಹಸಿಮೆಣಸು, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಕರಿಬೇವು, ಕೊತ್ತಂಬರಿ ಸೊಪ್ಪು,ಅರಿಶಿನ, ಚಾಟ್ ಮಸಾಲ, ಜೀರಿಗೆಪುಡಿ, ಕಡಲೆಹಿಟ್ಟು, ಅಕ್ಕಿ ಹಿಟ್ಟು, ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

ಗ್ಯಾಸ್ ಮೇಲೆ ಬಾಣಲೆ ಇಟ್ಟು ಎಣ್ಣೆ ಹಾಕಿ ಕಾಯಲು ಬಿಡಿ. ನಂತರ ಸ್ವಲ್ಪ ಸ್ವಲ್ಪ ಹಿಟ್ಟು ಕೈಯಲ್ಲಿ ತೆಗೆದುಕೊಂಡು ಕಾದ ಎಣ್ಣೆಯಲ್ಲಿ ಹಾಕಿ ಹೊಂಬಣ್ಣ ಬರುವವರಗೆ ಕರಿದರೆ ಸ್ವೀಟ್ ಕಾರ್ನ್ ಪಕೋಡಾ ಸವಿಯಲು ಸಿದ್ಧ.

Ashika S

Recent Posts

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

15 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

40 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

53 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago