ಕೇವಲ 10 ನಿಮಿಷದಲ್ಲಿಯೇ ತಯಾರಾಗುತ್ತೆ ಜೀರಾ ರೈಸ್

ಜೀರಾ ರೈಸ್ ಇದು ಜೀರಿಗೆ, ತುಪ್ಪ ಮತ್ತು ಅಕ್ಕಿಯೊಂದಿಗೆ ತಯಾರಿಸಿದ ಸುಲಭ ಮತ್ತು ರುಚಿಯ ರೈಸ್ ಪಾಕವಿಧಾನ. ಇದನ್ನು ಸಾಮಾನ್ಯವಾಗಿ ದಾಲ್ ಪಾಕವಿಧಾನಗಳ ಆಯ್ಕೆಯೊಂದಿಗೆ ನೀಡಲಾಗುತ್ತದೆ, ನೀವೂ ಕೇವಲ 10 ನಿಮಿಷದಲ್ಲಿಯೇ  ಮಾಡಬಹುದಾಗಿದೆ.

ಬೇಕಾಗುವ ಸಾಮಗ್ರಿಗಳು:
* ಅಕ್ಕಿ- 1ಕಪ್
* ತುಪ್ಪ- ಅರ್ಧ ಕಪ್
* ಪಲಾವ್ ಎಲೆ- 2
* ಚಕ್ಕೆ, ಲವಂಗ- ಸ್ವಲ್ಪ
* ಜೀರಿಗೆ- 4 ಚಮಚ
* ಹಸಿಮೆಣಸಿನಕಾಯಿ- 2
* ರುಚಿಗೆ ತಕ್ಕಷ್ಟು ಉಪ್ಪು
* ಕೊತ್ತಂಬರಿಸೊಪ್ಪು- ಸ್ವಲ್ಪ

ಮಾಡುವ ವಿಧಾನ: ಅಕ್ಕಿಯನ್ನು ಚೆನ್ನಾಗಿ ತೊಳೆದು 20 ನಿಮಿಷಗಳ ಕಾಲ ನೆನೆಸಿಡಿ. ಕುಕ್ಕರ್‌ಗೆ ತುಪ್ಪ ಹಾಕಿ ಬಿಸಿ ಮಾಡಿ ನಂತರ ಪಲಾವ್ ಎಲೆ, ಚಕ್ಕೆ, ಲವಂಗ, ಜೀರಿಗೆ, ಹಸಿಮೆಣಸಿನಕಾಯಿಯನ್ನು ಕತ್ತರಿಸಿ ಹಾಕಿ ಸ್ವಲ್ಪ ಫ್ರೈ ಮಾಡಿ. ನಂತರ ಅಕ್ಕಿಯನ್ನು ಹಾಕಿ ಸ್ವಲ್ಪ ಸಣ್ಣ ಉರಿಯಲ್ಲಿ ಫ್ರೈ ಮಾಡಿ.  ನಂತರ ಇದಕ್ಕೆ 2 ಕಪ್ ನೀರು ಹಾಕಿ ಉಪ್ಪು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ. ಕೊತ್ತಂಬರಿ ಸೇರಿಸಿ ಬೇಯಿಸಿದರೆ ರುಚಿಯಾದ ಜೀರಾ ರೈಸ್ ಸವಿಯಲು ಸಿದ್ಧವಾಗುತ್ತದೆ.

Ashika S

Recent Posts

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

11 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

27 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

38 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

52 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

58 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

1 hour ago