ಈಗ ಮಾವಿನ ಕಾಲವಾಗಿದ್ದು, ಅಲ್ಲಲ್ಲಿ ಮಾವಿನ ಕಾಯಿ ಮತ್ತು ಹಣ್ಣುಗಳು ಮಾರಾಟಕ್ಕೆ ಬರುತ್ತಿವೆ. ಹೀಗಾಗಿ ಇವುಗಳಿಂದ ಹಲವಾರು ಪದಾರ್ಥವನ್ನು ತಯಾರಿಸುವುದು ಸಾಮಾನ್ಯವಾಗಿ ಕಂಡು ಬರುತ್ತದೆ. ಅದರಲ್ಲೂ ಮಾವಿನಕಾಯಿಯ ತಂಬುಳಿ ಸುಲಭವಾಗಿ ತಕ್ಷಣಕ್ಕೆ ಮಾಡಬಹುದಾದ ಖಾದ್ಯವಾಗಿರುವುದರಿಂದ ಯಾರು ಬೇಕಾದರೂ ಮಾಡಬಹುದು.
ಬೇಕಾಗುವ ಪದಾರ್ಥಗಳು: ಮಾವಿನಕಾಯಿ-1, ಮೊಸರು- ಒಂದು ಬಟ್ಟಲು, ಒಣ ಮೆಣಸು- 4-5, ಕಾಯಿತುರಿ- ಅರ್ಧ ಬಟ್ಟಲು, ಇಂಗು- ಸ್ವಲ್ಪ, ಉಪ್ಪು- ರುಚಿಗೆ ತಕ್ಕಷ್ಟು, ಕೊತ್ತಂಬರಿ ಸೊಪ್ಪು_ ಸ್ವಲ್ಪ
ಮಾಡುವುದು ಹೇಗೆ?: ಮೊದಲಿಗೆ ಮಾವಿನ ಕಾಯಿ ಮತ್ತು ತೆಂಗಿನಕಾಯಿಯನ್ನು ತುರಿದಿಟ್ಟುಕೊಳ್ಳಬೇಕು. ಬಳಿಕ ಮಾವಿನಕಾಯಿ ಹಾಗೂ ಕಾಯಿ ತುರಿಯೊಂದಿಗೆ ಉಪ್ಪು, ಇಂಗು, ಒಣಮೆಣಸು ಎಲ್ಲವನ್ನು ಮಿಕ್ಸಿಗೆ ಹಾಕಿ ಸ್ವಲ್ಪ ನೀರು ಹಾಕಿ ಚೆನ್ನಾಗಿ ರುಬ್ಬಬೇಕು. ಆ ನಂತರ ಅದನ್ನು ಮೊಸರಿನೊಂದಿಗೆ ಮಿಕ್ಸ್ ಮಾಡಬೇಕು ಇದಾದ ಬಳಿಕ ಕೊತ್ತಂಬರಿ ಸೊಪ್ಪನ್ನು ಅದರ ಮೇಲೆ ಉದುರಿಸಿದರೆ ಮಾವಿನ ಕಾಯಿ ತಂಬುಳಿ ಸವಿಯಲು ಸಿದ್ದ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…