ಆರೋಗ್ಯಕ್ಕೆ ಹಿತವೆನಿಸುವ ವೆಜ್ ಮಿಕ್ಸ್ ಪರೋಟ

ಮೈದಾ ಹಿಟ್ಟಿನಿಂದ ತಯಾರು ಮಾಡುವ ಪರೋಟವು ಆರೋಗ್ಯಕ್ಕೆ ಹಿತ ನೀಡುವುದಿಲ್ಲ. ಹೀಗಾಗಿ ಮೈದಾದ ಬದಲಿಗೆ  ಗೋಧಿ ಹಿಟ್ಟಿನೊಂದಿಗೆ ಇನ್ನೊಂದಷ್ಟು ತರಕಾರಿ ಸೇರಿದಂತೆ ಬೇರೆ ಬೇರೆ ಪದಾರ್ಥಗಳನ್ನು ಸೇರಿಸಿ ವೆಜ್ ಮಿಕ್ಸ್ ಪರೋಟ ತಯಾರು ಮಾಡಿದರೆ ನಾಲಿಗೆಗೆ ಮಾತ್ರ ರುಚಿಯಾಗಿರದೆ ಆರೋಗ್ಯ ಕಾಪಾಡುವಲ್ಲಿಯೂ ಸಹಕಾರಿಯಾಗಲಿದೆ.

ಬೇಕಾಗುವ ಪದಾರ್ಥಗಳು: ಗೋಧಿ ಹಿಟ್ಟು- ಒಂದೂವರೆ ಕಪ್, ಕಡ್ಲೆಬೇಳೆ ಹಿಟ್ಟು- ಕಾಲು ಕಪ್,  ಆಲೂಗೆಡ್ಡೆ- ಮುಕ್ಕಾಲು ಕಪ್, ಪಾಲಕ್ ಸೊಪ್ಪು- ಒಂದು ಕಪ್, ಹಸಿಮೆಣಸಿಕ ಕಾಯಿ- ಐದರಿಂದ ಆರು, ಕ್ಯಾರೆಟ್ ತುರಿ- ಕಾಲು ಕಪ್,ಮೊಸರು- ನಾಲ್ಕೈದು ಚಮಚ, ಉಪ್ಪು- ರುಚಿಗೆ ತಕ್ಕಷ್ಟು, ಎಣ್ಣೆ- ಬೇಯಿಸಲು ಅಗತ್ಯವಿರುವಷ್ಟು.

ಮಾಡುವ ವಿಧಾನ: ಮೊದಲಿಗೆ ಆಲೂಗೆಡ್ಡೆಯನ್ನು ಬೇಯಿಸಿಟ್ಟುಕೊಳ್ಳಬೇಕು, ಆ ನಂತರ ಪಾಲಕ್ ಸೊಪ್ಪು,  ಹಸಿಮೆಣಸು, ಕ್ಯಾರೆಟ್ ಸೇರಿಸಿ ಮಿಕ್ಸಿ ಮಾಡಿಟ್ಟುಕೊಳ್ಳಬೇಕು. ಬಳಿಕ ಗೋಧಿ ಮತ್ತು ಕಡ್ಲೆ ಹಿಟ್ಟಿಗೆ ಎಲ್ಲ ಪದಾರ್ಥಗಳನ್ನು ಸೇರಿಸಿ ಚೆನ್ನಾಗಿ ಕಲೆಸಬೇಕು. ಹದಕ್ಕೆ ಬಂದ ಬಳಿಕ ಚಿಕ್ಕದಾಗಿ ಪರೋಟ ತಯಾರಿಸಿ ಬಳಿಕ ತಾವಾದಲ್ಲಿ ಸ್ವಲ್ಪ ಎಣ್ಣೆ ಹಾಕಿಕೊಂಡು ಎರಡು ಬದಿಯೂ ಚೆನ್ನಾಗಿ ಕಾಯಿಸಿ ತೆಗೆದರೆ ವೆಜ್ ಮಿಕ್ಸ್ ಪರೋಟ ಸೇವಿಸಲು ಸಿದ್ಧವಾದಂತೆಯೇ..

Ashika S

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

11 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

19 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

25 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

39 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

56 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago