Categories: ಭವಿಷ್ಯ

ಇಂದಿನ ರಾಶಿ ಫಲ : ಈ ರಾಶಿಯವರಿಗೆ ಉದ್ಯೋಗದಲ್ಲಿ ಲಾಭ

ಚಂದ್ರನು ವೃಷಭ ರಾಶಿಯಿಂದ ಬುಧವಾರ ರಾತ್ರಿ 07:20ಕ್ಕೆ ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ವೃಷಭ, ಕಟಕ,ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು ನೋಡುವುದಾದರೆ, ವೃಷಭ ರಾಶಿಯವರು ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ.ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ. ಕಟಕ ರಾಶಿಯವರು ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ?

ಮೇಷ:  ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಹಣ ಗಳಿಸುವ ವಿವಿಧ ಮಾರ್ಗಗಳು ಪುಷ್ಟಿ ನೀಡಲಿವೆ. ಅನಗತ್ಯವಾಗಿ ಇತರರ ಬಗ್ಗೆ ಮನೆಯಲ್ಲಿ ಚರ್ಚಿಸುವುದು ಬೇಡ ಇದು ಮನೆಯ ವಾತಾವರಣ ಹಾಳುಗೆಡುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ವೃಷಭ: ಗತಿಸಿದ ಘಟನೆಗಳ ಬಗ್ಗೆ ಚಿಂತಿಸಿ, ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಸಾಧ್ಯವಾದಷ್ಟು ತಾಳ್ಮೆಯಿಂದ ಇರಿ.ಭೂಮಿ, ಆಸ್ತಿ ಖರೀದಿ ವ್ಯವಹಾರದಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಖರ್ಚು ಹೆಚ್ಚಾಗಲಿದೆ.ಆರೋಗ್ಯ ಹಾಗೂ ಉದ್ಯೋಗದಲ್ಲಿ ಸಾಧಾರಣ ಫಲ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಮಿಥುನ: ಅನಿವಾರ್ಯವಾಗಿ ಖರ್ಚು, ಪ್ರಯಾಣ ಮಾಡುವ ಸಾಧ್ಯತೆ ಇದೆ. ಕುಟುಂಬದಲ್ಲಿ ಯಾವುದೋ ವಿಷಯಕ್ಕೆ ಪರಸ್ಪರರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ಅರ್ಹ ನೌಕರರಿಗೆ ಇಂದು ಉದ್ಯೋಗದಲ್ಲಿ ಬಡ್ತಿ ಹೊಂದುವ ಅವಕಾಶ ಕೂಡಿಬರಲಿದೆ. ಆರೋಗ್ಯ ಉತ್ತಮವಾಗಿರಲಿದೆ, ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

ಕನ್ಯಾ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ,ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

ತುಲಾ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಇರಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ದೈಹಿಕವಾಗಿ ಹಾಗೂ ಮಾನಸಿಕವಾಗಿ ಒತ್ತಡಕ್ಕೆ ಸಿಲುಕುವಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಮಕರ: ಹೂಡಿಕೆ ಮಾಡುವಾಗ ಆಲೋಚಿಸಿ ಮುಂದುವರಿಯಿರಿ. ಹೊಸ ಸ್ನೇಹಿತರ ಪರಿಚಯದಿಂದ ಉದ್ಯೋಗದಲ್ಲಿ ಲಾಭವಾಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

ಕುಂಭ: ಅವಸರದಲ್ಲಿ ಯಾವ ಕೆಲಸವನ್ನು ಮಾಡಬೇಡಿ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

ಮೀನ: ಈ ದಿನ ಆರೋಗ್ಯ ಪರಿಪೂರ್ಣವಾಗಿರಲಿದೆ. ಗಾಡಿ ಓಡಿಸುವಾಗ ಎಚ್ಚರಿಕೆ ವಹಿಸಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯಲಿದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 8

Nisarga K

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago