News Karnataka Kannada
Thursday, May 02 2024
ಕ್ರೈಮ್

ಹಾಸ್ಟೆಲ್‌ ನಲ್ಲಿ ಬೆಂಕಿ ಅನಾಹುತ: 13 ಮಂದಿ ಸಾವು

ಮದ್ಯಪಾನ ಮಾಡಬೇಡಿ ಎಂದಿದ್ದಕ್ಕೆ ಪತಿಯೊಬ್ಬ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಬುಡೌನ್​ನಲ್ಲಿ ನಡೆದಿದೆ.
Photo Credit : News Kannada

ಅಲ್ಮಾಟಿ: ಕಜಕಿಸ್ತಾನದ ಅಲ್ಮಾಟಿಯಾನ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ಗುರುವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ನಗರದ ತುರ್ತು ವಿಭಾಗ ತಿಳಿಸಿದೆ.

ಮೂರು ಅಂತಸ್ತಿನ ವಸತಿ ಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೊದಲ ಮಹಡಿ ಮತ್ತು ನೆಲಮಾಳಿಗೆಯನ್ನು ಹಾಸ್ಟೆಲ್ ಆಗಿ ಪರಿವರ್ತಿಸಲಾಗಿತ್ತು. ಇಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆಯ ಸಮಯದಲ್ಲಿ ಹಾಸ್ಟೆಲ್‌ನಲ್ಲಿ 72 ಜನರಿದ್ದರು ಎಂದು ಇಲಾಖೆ ತಿಳಿಸಿದೆ. ಒಟ್ಟು 59 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು