News Karnataka Kannada
Monday, May 13 2024
ಕ್ರೈಮ್

ಬರೋಬ್ಬರಿ 14 ಸಾವಿರ ಮಂದಿ ಮಾದಕ ವ್ಯಸನಿಗಳ ಸೆರೆ

Arrst
Photo Credit : News Kannada

ಕೊಲಂಬೊ: ಮಹತ್ವದ ಬೆಳವಣಿಗೆಯೊಂದರಲ್ಲಿ ಶ್ರೀಲಂಕಾ ಪೊಲೀಸರು ಕೇವಲ ಒಂದು ವಾರದಲ್ಲಿ ಸುಮಾರು 14,000 ಮಾದಕ ವ್ಯಸನಿಗಳನ್ನು ಬಂಧಿಸಿದ್ದಾರೆ. ಡಿ. 17 ರಿಂದ 24 ರವರೆಗೆ ಈ ಕಾರ್ಯಾಚರಣೆಯನ್ನು ನಡೆಸಿರುವ ಪೊಲೀಸರು 13,666 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲದೇ 717 ಇತರ ಜನರನ್ನು ಸಹ ತನಿಖೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಂಧಿತರ ಪೈಕಿ ಸುಮಾರು 174 ಮಂದಿ ಅಕ್ರಮ ಹಣ ಆಸ್ತಿಗಳಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇತರರಿಗೆ ಸಂಬಂಧಿಸಿದಂತೆ, ಅಧಿಕೃತ ಮೂಲಗಳ ಪ್ರಕಾರ ಸುಮಾರು 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು