News Karnataka Kannada
Monday, April 29 2024
ವಿದೇಶ

ಭೀಕರ ರೈಲು ಅಪಘಾತ ಕನಿಷ್ಠ 15 ಮಂದಿ ಬಲಿ: ಬೋಗಿಗಳ ನಡುವೆ ಸಿಲುಕಿದ್ದಾರೆ ಹಲವು ಮಂದಿ

15 Killed, 100 Others Injured After 2 Trains Collide In Bangladesh
Photo Credit : News Kannada

ಢಾಕಾ: ಬಾಂಗ್ಲಾದೇಶದಲ್ಲಿ ಸೋಮವಾರ ಎರಡು ರೈಲುಗಳು ಡಿಕ್ಕಿಯಾಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು ಮತ್ತು 100 ಮಂದಿ ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಭೈರಬ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸರಕು ಸಾಗಣೆ ರೈಲು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ನಾವು ಇದುವರೆಗೆ 15 ಶವಗಳನ್ನು ಸ್ಥಳದಿಂದ ಹೊರತೆಗೆದಿದ್ದೇವೆ. ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಭೈರಬ್‌ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳ ರಾಜಧಾನಿ ಢಾಕಾದಿಂದ ಈಶಾನ್ಯಕ್ಕೆ 60 ಕಿಲೋಮೀಟರ್ ದೂರದಲ್ಲಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಕ್ಷಣಾ ಅಧಿಕಾರಿ ರೆಹಮಾನ್‌ ಹೇಳಿದ್ದಾರೆ.

ಹಲವರು ರೈಲಿನ ಬೋಗಿಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಬಾಂಗ್ಲಾದೇಶದಲ್ಲಿ ರೈಲು ಅಪಘಾತಗಳು ಸಾಮಾನ್ಯವಾಗಿದ್ದು, ಕಳಪೆ ಸಿಗ್ನಲಿಂಗ್, ಚಾಲಕರ ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್‌ಗಳು ಅಥವಾ ಮೂಲಸೌಕರ್ಯ ಕೊರತೆಯಿಂದ ಇಂತಹ ಅಪಘಾತಗಳು ಸಂಭವಿಸುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು