News Karnataka Kannada
Monday, April 29 2024
ಕ್ರೈಮ್

ಬಲೂಚಿಸ್ತಾನದಲ್ಲಿ ಬಾಂಬ್ ಸ್ಫೋಟ: 20 ಮಂದಿ ಸಾವು

20 killed in bomb blast in Balochistan
Photo Credit : IANS

ಪಾಕಿಸ್ತಾನ: ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 20ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ. ಇನ್ನೂ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಮೂಲವೊಂದು ವರದಿ ಮಾಡಿದೆ.

ಬಲೂಚಿಸ್ತಾನದ ಮಸ್ತುಂಗ್‌ನ ಅಲ್ ಫಲಾಹ್ ರಸ್ತೆಯಲ್ಲಿರುವ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ವರದಿಯಾಗಿದೆ. ಈದ್ ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಜನರು ಅಲ್ಲಿ ಸೇರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ ಎಂದು ಮಸ್ತುಂಗ್ ಎಸ್‌ಎಸ್‌ಪಿ ಶೋಯೆಬ್ ಮಸೂದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅವರ ಪ್ರಕಾರ, ಪ್ರಸ್ತುತ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯಾ ಬಾಂಬರ್‌ನಿಂದ ಸ್ಫೋಟ ನಡೆದಿರುವ ಸಾಧ್ಯತೆಯನ್ನು ಶೋಯೆಬ್ ಮಸೂದ್ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು